ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರಿಂದ ಜೂ.20ರಂದು ಉದ್ಘಾಟನೆಯಾಗಲಿರೋ ಡಾ. ಬಾಬಾಸಾಹೇಬ್ ಅಂಬೇಡ್ಕರ್ ಸ್ಕೂಲ್ ಆಫ್ ಎಕನಾಮಿಕ್ಸ್ ಸಭಾಂಗಣದ ತಯಾರಿ ಬಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಂದು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.
ಭದ್ರತೆ ಬಗ್ಗೆ, ಸಿದ್ಧತಾ ಕಾರ್ಯಗಳ ಕುರಿತು ಸಿಎಂ ಪರಿಶೀಲನೆ ನಡೆಸಿದರು. ಉನ್ನತ ಶಿಕ್ಷಣ ಸಚಿವ ಡಾ. ಅಶ್ವತ್ಥ ನಾರಾಯಣ, ಬಿಬಿಎಂಪಿ ಆಡಳಿತಾಧಿಕಾರಿ ರಾಕೇಶ್ ಸಿಂಗ್, ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಮತ್ತಿತರ ಅಧಿಕಾರಿಗಳು ಉಪಸ್ಥಿತರಿದ್ದರು.
Kshetra Samachara
18/06/2022 10:01 pm