ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೋಮವಾರ ಪ್ರಧಾನಿ ನರೇಂದ್ರ ಮೋದಿ ಭಾಗವಹಿಸಲಿರುವ ಸಾರ್ವಜನಿಕ ಸಮಾರಂಭ ಸ್ಥಳ ಕೊಮ್ಮಘಟ್ಟಕ್ಕೆ ಇಂದು ಭೇಟಿ ನೀಡಿ, ಸಿದ್ಧತಾ ಕಾರ್ಯ ಮತ್ತೊಮ್ಮೆ ಸೂಕ್ಷ್ಮವಾಗಿ ಪರಿಶೀಲಿಸಿದರು.
ಈ ಸಂದರ್ಭ ಸಚಿವರಾದ ಎಸ್. ಟಿ. ಸೋಮಶೇಖರ್, ಮುನಿರತ್ನ, ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.
ನಾಳೆ ಶಂಕು ಸ್ಥಾಪನೆಯಾಗಲಿರುವ ಬೆಂಗಳೂರು ಉಪನಗರ ರೈಲು ಯೋಜನೆ, ರಾಷ್ಟ್ರೀಯ ಹೆದ್ದಾರಿ ಕುರಿತು ಮುಖ್ಯಮಂತ್ರಿಗಳಿಗೆ ಅಧಿಕಾರಿಗಳು ಪ್ರಾತ್ಯಕ್ಷಿಕೆ ಸಹಿತ ವಿವರಣೆ ನೀಡಿದರು.
Kshetra Samachara
20/06/2022 07:33 am