ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಂಗಳೂರು: ಇಂದು ಬೆಳಗ್ಗೆ 11ರಿಂದ 1ಗಂಟೆವರೆಗೂ ಏರ್‌ಪೋರ್ಟ್‌ ರಸ್ತೆ ಜನ ಸಂಚಾರಕ್ಕೆ ಬಂದ್.!

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಮತ್ತು ನಾಳೆ (ಎರಡು ದಿನ) ರಾಜ್ಯ ಪ್ರವಾಸ ಕೈಗೊಳ್ಳಲಿದ್ದಾರೆ. ಇಂದು ಬೆಂಗಳೂರಿನಲ್ಲಿ ವಿವಿಧ ಕಾರ್ಯಕ್ರಮಗಳಿಗೆ ಹಾಜರಾಗಲಿದ್ದು, ನಾಳೆ (ಜೂನ್ 21)ರಂದು ಮೈಸೂರಿನಲ್ಲಿ ವಿಶ್ವ ಯೋಗ ದಿನದಲ್ಲಿ ಭಾಗವಹಿಸಲು ತೆರಳಲಿದ್ದಾರೆ.

ಇಂದು ಬೆಳಗ್ಗೆ 11:50ಕ್ಕೆ ಖುದ್ದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಪ್ರಧಾನಿ ಮೋದಿ ಅವರನ್ನು ಯಲಹಂಕದ ಏರ್‌ಪೋರ್ಟ್‌ ಬಳಿ ಬರಮಾಡಿಕೊಳ್ಳಲಿದ್ದಾರೆ. ಪ್ರಧಾನಿ‌ ನರೇಂದ್ರ ಮೋದಿ ಅವರ ಭದ್ರತೆ ದೃಷ್ಟಿಯಿಂದ ಬೆಂಗಳೂರು ಸಂಚಾರಿ ಪೊಲೀಸರು ಬೆಳಗ್ಗೆ 11ರಿಂದ 1 ಗಂಟೆಯವರೆಗೂ ಯಲಹಂಕ ಏರ್‌ಪೋರ್ಟ್‌ನಿಂದ ಹೆಬ್ಬಾಳ ಪ್ಲೈಓವರ್ ವರೆಗೂ ಜನ ಸಂಚಾರಕ್ಕೆ ರಸ್ತೆಯನ್ನು ಬಂದ್ ಮಾಡಲು ಸೂಚಿಸಿ, ಸಾರ್ವಜನಿಕರು ಸಹಕರಿಸಬೇಕೆಂದು ತಿಳಿಸಿದ್ದಾರೆ.

ಸುರೇಶ್ ಬಾಬು ಪಬ್ಲಿಕ್ ನೆಕ್ಸ್ಟ್ ಯಲಹಂಕ..

Edited By : Shivu K
PublicNext

PublicNext

20/06/2022 08:56 am

Cinque Terre

14.91 K

Cinque Terre

0

ಸಂಬಂಧಿತ ಸುದ್ದಿ