ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಂಗಳೂರು: ಬಿಜೆಪಿ ಪಕ್ಷ ಸೇರ್ಪಡೆಗೊಂಡ ಕಾಂಗ್ರೆಸ್ ಮುಖಂಡರು!

ವರದಿ- ಬಲರಾಮ್ ವಿ

ಬೆಂಗಳೂರು: ಮಹದೇವಪುರ ಕ್ಷೇತ್ರ ಗ್ರಾಮಾಂತರ ಮಂಡಲದ ದಿನ್ನೂರಿನಲ್ಲಿ ಶಾಸಕ ಅರವಿಂದ ಲಿಂಬಾವಳಿ ಅಧ್ಯಕ್ಷತೆಯಲ್ಲಿ ಹಾಗೂ ಬಿಜೆಪಿ ಮುಖಂಡ ರಾಮಾಂಜಿನೇಯ ನೇತೃತ್ವದಲ್ಲಿ ನೂರಾರು ಕಾಂಗ್ರೆಸ್ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡರು.

ಕಾಂಗ್ರೆಸ್ ಮುಖಂಡ ಹಾಗೂ ರಜಪೂತ ಸಂಘದ ಅಧ್ಯಕ್ಷ ಸೋಮ್ ಸಿಂಗ್ ಮತ್ತು 250 ಕ್ಕೂ ಹೆಚ್ಚು ಕಾಂಗ್ರೆಸ್ ಮುಖಂಡರು ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾದರು. ಸೇರ್ಪಡೆಗೊಂಡ ಕಾರ್ಯಕರ್ತರನ್ನು ಶಾಸಕ ಅರವಿಂದ ಲಿಂಬಾವಳಿ ಅವರು ಶಾಲು ಹಾಕಿ, ಬಾವುಟ ನೀಡಿ ಪಕ್ಷಕ್ಕೆ ಬರಮಾಡಿಕೊಂಡರು.

ಪಕ್ಷದ ತತ್ವ ಸಿದ್ದಾಂತಗಳನ್ನು ಒಪ್ಪಿಕೊಂಡು ಪಕ್ಷದ ಸೇರ್ಪಡೆಗೆ ಅನ್ಯ ಪಕ್ಷದಿಂದ ಬಂದಿರುವ ಮುಖಂಡರೊಂದಿಗೆ ಪಕ್ಷದ ಚೌಕಟ್ಟಿನಲ್ಲಿ ನಾವೆಲ್ಲರು ಒಗ್ಗೂಡಿ ಕೆಲಸ ಮಾಡೋಣ ಎಂದು ಶಾಸಕರು ಹೇಳಿದರು.

ಈ ಸಂದರ್ಭದಲ್ಲಿ ಪೌರಾಡಳಿತ ಸಚಿವ ಎಂ. ಟಿ. ಬಿ. ನಾಗರಾಜ್, ಗ್ರಾಮಾಂತರ ಮಂಡಲ ಅಧ್ಯಕ್ಷ ಬಿ. ಎನ್. ನಟರಾಜ್, ನಗರ ಮಂಡಲ ಅಧ್ಯಕ್ಷ ಮನೋಹರ ರೆಡ್ಡಿ, ಮಾಜಿ ಬಿಬಿಎಂಪಿ ಸದಸ್ಯ ನಿತೀಶ್ ಪುರುಷೋತ್ತಮ್, ರಾಮಾಂಜನೇಯ, ಹೂಡಿ ಪಿಳ್ಳಪ್ಪ, ಎಲ್.ರಾಜೇಶ್ ಮತ್ತಿತರರು ಇದ್ದರು.

Edited By : Manjunath H D
Kshetra Samachara

Kshetra Samachara

20/06/2022 08:39 pm

Cinque Terre

1.96 K

Cinque Terre

0

ಸಂಬಂಧಿತ ಸುದ್ದಿ