ರಿಪೋರ್ಟ್- ರಂಜಿತಾ ಸುನಿಲ್
ಬೆಂಗಳೂರು: ಕರುನಾಡ ಜನತೆಗೆ ನನ್ನ ಪ್ರೀತಿಯ ನಮಸ್ಕಾರಗಳು. ಬೆಂಗಳೂರಿನ ಮಹಾಜನತೆಗೆ ವಿಶೇಷ ನಮಸ್ಕಾರಗಳು ಎಂದು ಕನ್ನಡದಲ್ಲಿ ಮಾತಾಡಿದ ಮೋದಿ, ಇಂದು ಮಹತ್ವದ ದಿನವಾಗಿದೆ. ಕರ್ನಾಟಕದಲ್ಲಿ ಹಲವು ಮೂಲಭೂತ ಯೋಜನೆಗಳನ್ನು ಕಲ್ಪಿಸುವ ಯೋಜನೆಗಳಿಗೆ ಚಾಲನೆ ಕೊಟ್ಟಿರೋದು ನಮಗೆ ಸಂತೋಷ ತಂದಿದೆ ಎಂದು ಕನ್ನಡದಲ್ಲಿ ಭಾಷಣ ಆರಂಭ ಮಾಡಿದ್ರು. ಇವತ್ತು 27 ಸಾವಿರ ಕೋಟಿ ವೆಚ್ಚದ ಯೋಜನೆಗಳ ಲೋಕಾರ್ಪಣೆ, ಶಂಕುಸ್ಥಾಪನೆ ಆಗಿದೆ, ಹಲವು ಯೋಜನೆಗಳ ಮೂಲಕ ಜನರ ಸೇವೆಗೆ ಅವಕಾಶ ಸಿಕ್ಕಿದೆ, ಇಲ್ಲಿಗೆ ಬರೋಮುಂಚೆ ಐಐಎಸ್‌ಸಿ, ಬೇಸ್ ವಿವಿಯ ಕಾರ್ಯಕ್ರಮಗಳಲ್ಲಿ ಭಾಗವಹಿಸಿದ್ದೆ. ಬೆಂಗಳೂರಿನಲ್ಲಿ ಇದು ಕೊನೆಯ ಕಾರ್ಯಕ್ರಮ, ಇಲ್ಲಿಂದ ಮೈಸೂರಿಗೆ ಹೋಗ್ತೇನೆ
ರಾಜ್ಯದಲ್ಲಿ ಐದು ನ್ಯಾಷನಲ್ ಹೈವೇ ಯೋಜನೆಗಳು, ಏಳು ರೈಲು ಯೋಜನೆಗಳಿಗೆ ಚಾಲನೆ ಕೊಟ್ಟಿದ್ದೇವೆ ಎಂದು ಪ್ರಧಾನಿ ಹೇಳಿದರು.
ಬೆಂಗಳೂರಿನ ಲಕ್ಷಾಂತರ ಜನರಿಗೆ ಕನಸಿನ ನಗರಿ, ಬೆಂಗಳೂರಿನ ಅಭಿವೃದ್ಧಿ ಲಕ್ಷಾಂತರ ಕನಸುಗಳ ವಿಕಾಸ ಗೊಂಡಿವೆ. ಕೇಂದ್ರದಿಂದ ಬೆಂಗಳೂರು ಅಭಿವೃದ್ಧಿಗೆ ಇನ್ನಷ್ಟು ಉತ್ತೇಜನ ಕೊಡಲಾಗ್ತಿದೆ. ನಗರದಲ್ಲಿ ಸಂಚಾರ ದಟ್ಟಣೆ ಇಳಿಸಲು ಹಲವು ಯೋಜನೆ ಕೊಡಲಾಗಿದೆ. ಸಂಚಾರ ದಟ್ಟಣೆಯಿಂದ ಮುಕ್ತಿ ಕೊಡಲು ರೈಲು, ರಸ್ತೆ, ಮೂಲಸೌಕರ್ಯ ಹೆಚ್ಚಿಸಿದ್ದೇವೆ, ಮೂಲಸೌಕರ್ಯ ಕೊಡುವ ಕೆಲಸವನ್ನು ನಮ್ಮ ಡಬಲ್ ಇಂಜಿನ್ ಸರ್ಕಾರ ಮಾಡಿದೆ, ಸಬರ್ಬನ್ ಯೋಜನೆ ಬಗ್ಗೆ 40 ವರ್ಷದಿಂದ ಚರ್ಚೆ ಮಾತ್ರ ನಡೀತಿತ್ತು. ನಾವು ಈಗ ನಿಮ್ಮ ಕನಸನ್ನು ನನಸು ಮಾಡಿದ್ದೇವೆ, ಹದಿನಾರು ವರ್ಷದವರೆಗೆ ಸಬರ್ಬನ್ ರೈಲು ಯೋಜನೆ ನೆನೆಗುದಿಗೆ ಬಿದ್ದಿತ್ತು. ಬೆಂಗಳೂರಿಗರ ಎಲ್ಲ ಕನಸುಗಳನ್ನು ನನಸು ಮಾಡಲು ನಾವು ಬದ್ಧರಾಗಿದ್ಧೇವೆ.
ಕೊರೋನಾ ವೇಳೆ ಬೆಂಗಳೂರಿನಲ್ಲಿ ಇರುವ ನಮ್ಮ ಯುವ ಸಮೂಹ ಉತ್ತಮ ಸೇವಾಕಾರ್ಯ ಮಾಡಿದ್ದಾರೆ. ಬೆಂಗಳೂರಿಗೆ ಜನರ ಮನಸ್ಥಿತಿ ಬದಲಾಯಿಸುವ ಶಕ್ತಿ ಇದೆ, ಜಗತ್ತಿನ ಮುಂಚೂಣಿ ನಗರಗಳಲ್ಲಿ ಬೆಂಗಳೂರು ಒಂದು, ಉದ್ಯೋಗ ಸೃಷ್ಟಿ, ನವೋದ್ಯಮಗಳ ಸೃಷ್ಟಿ ಮಾಡುವ ನಗರ ಇದು ಎಂದು ಪ್ರಧಾನಿ ಮೋದಿ ಬೆಂಗಳೂರು ನಗರವನ್ನು ಹೊಗಳಿದ್ದಾರೆ.
PublicNext
20/06/2022 08:48 pm