ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಂಗಳೂರು: ಕಾಂಗ್ರೆಸ್ ನಾಯಕರ ವಿರುದ್ಧ ಇ.ಡಿ., ಐಟಿ, ಸಿಬಿಐ ದುರ್ಬಳಕೆ; ಕಾಂಗ್ರೆಸ್ ಪ್ರತಿಭಟನೆ

ವರದಿ: ಬಲರಾಮ್ ವಿ.

ಬೆಂಗಳೂರು: ಇ.ಡಿ., ಐಟಿ, ಸಿಬಿಐ ತನಿಖೆ ನೆಪದಲ್ಲಿ ಕಾಂಗ್ರೆಸ್ ಪಕ್ಷದ ರಾಜಕೀಯ ವರ್ಚಸ್ಸನ್ನು ಕುಗ್ಗಿಸುವ ದುರುದ್ದೇಶದಿಂದ ಬಿಜೆಪಿ ಸರ್ಕಾರ ಕಿರುಕುಳ ನೀಡುತ್ತಿದೆ ಎಂದು ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

ಮಹದೇವಪುರ ಕ್ಷೇತ್ರದ ವರ್ತೂರು ಕೊಡಿಯಲ್ಲಿ ವರ್ತೂರು ಹಾಗೂ ಮಾರತ್ತಹಳ್ಳಿ ಬ್ಲಾಕ್ ಕಾಂಗ್ರೆಸ್ ವತಿಯಿಂದ ಪ್ರತಿಭಟನೆ ನಡೆಯಿತು. ಈ ಸಂದರ್ಭ ಕೆಪಿಸಿಸಿ ಎಸ್ಸಿ ಘಟಕ ರಾಜ್ಯ ಉಪಾಧ್ಯಕ್ಷ ನಲ್ಲೂರಹಳ್ಳಿ ನಾಗೇಶ್ ಮಾತನಾಡಿ, ಬಿಜೆಪಿ ದ್ವೇಷ ರಾಜಕಾರಣ ಮಾಡುತ್ತಿರುವುದು ಸರಿಯಲ್ಲ. ಕಾಂಗ್ರೆಸ್ ನಾಯಕರಿಗೆ ಇ.ಡಿ., ಐಟಿ, ಸಿಬಿಐ ನೆಪದಲ್ಲಿ ಕಾಟ ಕೊಡುತ್ತಿರುವುದು ಸೂಕ್ತವಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ನಾನಾ ವಸ್ತುಗಳ ಮೇಲೆ ಬೆಲೆ ಏರಿಕೆಯಿಂದಾಗಿ ಇಂದು ಬಡವರು ಜೀವನ ನಡೆಸುವುದೇ ಕಷ್ಟವಾಗಿದೆ. ಮೋದಿ ಸರ್ಕಾರದಿಂದ ಬೇಸತ್ತ ಜನರು ಮುಂದಿನ ಚುನಾವಣೆಯಲ್ಲಿ ತಕ್ಕ ಪಾಠ ಕಲಿಸುವರು ಎಂದು ಮಾಜಿ ಪಾಲಿಕೆ ಸದಸ್ಯ ಉದಯ ಕುಮಾರ್ ಹರಿಹಾಯ್ದರು.

ಕಾಂಗ್ರೆಸ್ ನಾಯಕರು ಹಾಗೂ ಕಾರ್ಯಕರ್ತರ ಮೇಲಿನ ಪೊಲೀಸ್ ದೌರ್ಜನ್ಯದ ವಿರುದ್ಧ ಇಡೀ ದೇಶದಲ್ಲಿ ನಿರಂತರ ಪ್ರತಿಭಟನೆ ನಡೆಯುತ್ತಿವೆ ಎಂದರು.‌ ವರ್ತೂರು ಬ್ಲಾಕ್ ಅಧ್ಯಕ್ಷ ವಿಟಿಬಿ ಬಾಬು, ಮುಖಂಡರಾದ ರಾಮಕೃಷ್ಣಪ್ಪ, ವರ್ತೂರು ಬ್ಲಾಕ್ ಮಾಜಿ ಅಧ್ಯಕ್ಷ ಜಯರಾಮ್ ರೆಡ್ಡಿ, ಮಹಿಳಾ ಮುಖಂಡರಾದ ವನಜಾ ರೆಡ್ಡಿ, ಕವಿತಾ ಸೇರಿದಂತೆ ನೂರಾರು ಕಾರ್ಯಕರ್ತರು ಇದ್ದರು.

Edited By : Nagesh Gaonkar
Kshetra Samachara

Kshetra Samachara

21/06/2022 09:05 pm

Cinque Terre

2.69 K

Cinque Terre

0

ಸಂಬಂಧಿತ ಸುದ್ದಿ