ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಗೋವಿಂದ ರಾಜ ನಗರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿನ "ವೆಸ್ಟ್ ಆಫ್ ಕಾರ್ಡ್ ರಸ್ತೆ ಮೇಲುಸೇತುವೆ" ಕಾಮಗಾರಿಯ ಸ್ಥಳವನ್ನು ವಸತಿ ಸಚಿವ ವಿ.ಸೋಮಣ್ಣ ಪರಿಶೀಲಿಸಿದರು.
ನಗರದ ವೆಸ್ಟ್ ಆಫ್ ಕಾರ್ಡ್ ರಸ್ತೆಯಲ್ಲಿ ಸಿಗ್ನಲ್ ಮುಕ್ತ ಕಾರಿಡಾರ್ ನಿರ್ಮಿಸುವ ಸಲುವಾಗಿ ಮಂಜುನಾಥನಗರದ ಬಳಿ ಮೇಲುಸೇತುವೆ, ಶಿವನಗರ 1 ಮತ್ತು 8ನೇ ಮುಖ್ಯ ರಸ್ತೆಯ ಕೂಡು ಸ್ಥಳದಲ್ಲಿ ಕೆಳಸೇತುವೆ ಹಾಗು ಬಸವೇಶ್ವರ ನಗರ ವೃತ್ತದ ಏಕಮುಖ ಸಂಚಾರದ ಬಳಿ ಮೇಲುಸೇತುವೆಯ ಗ್ರೇಡ್ ಸೆಪರೇಟರ್ ಯೋಜನೆಯನ್ನು ಕೈಗೆತ್ತಿಕೊಳ್ಳಲಾಗಿತ್ತು.
ಶಿವನಗರ ನಂತರದ ಜಂಕ್ಷನ್‌ಗಳಾದ ಬಸವೇಶ್ವರ ನಗರ ಜಂಕ್ಷನ್ ಮತ್ತು 72ನೇ ಅಡ್ಡ ರಸ್ತೆಯ ಜಂಕ್ಷನ್ ಬಳಿ ಮೇಲುಸೇತುವೆ ನಿರ್ಮಾಣದ ಕಾಮಗಾರಿಯು ಪ್ರಗತಿಯಲ್ಲಿರುತ್ತದೆ. ಬಸವೇಶ್ವರ ಜಂಕ್ಷನ್ ಬಳಿ ಹೆಚ್ಚುವರಿ ಏಕಮುಖ ಸಂಚಾರದ ಮೇಲುಸೇತುವೆಯನ್ನು 20.925 ಕೋಟಿ ರೂ. ವೆಚ್ಚದಲ್ಲಿ ಒಟ್ಟು 467.35 ಮೀ ಉದ್ದ ನಿರ್ಮಾಣಕ್ಕೆ ಸರ್ಕಾರದಿಂದ ಅನುಮೋದನೆ ದೊರಕಿದ್ದು, ಗುತ್ತಿಗೆದಾರರಿಗೆ ಕಾರ್ಯಾದೇಶ ನೀಡಿ ಆಗಸ್ಟ್ ತಿಂಗಳೊಳಗಾಗಿ ಕಾಮಗಾರಿಯನ್ನು ಪೂರ್ಣಗೊಳಿಸಲು ಸಚಿವ ಸೋಮಣ್ಣ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
PublicNext
23/06/2022 09:27 pm