ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರ ಭೇಟಿ ವೇಳೆ ರಾಜಧಾನಿ ಬೆಂಗಳೂರಿನಲ್ಲಿ ಅಭಿವೃದ್ಧಿ ಪಡಿಸಲಾಗಿದ್ದ ರಸ್ತೆಗೆ ಹೊಂಡಾಗುಂಡಿ ಬಿದ್ದಿದ್ದ ಪ್ರಕರಣ ಸಂಬಂಧ ಸಮಗ್ರ ತನಿಖೆ ನಡೆಸಲು ಪಾಲಿಕೆ ಮುಂದಾಗಿದೆ. ಈ ಬಗ್ಗೆ ವಿಶೇಷ ಆಯುಕ್ತರ ನೇತೃತ್ವದಲ್ಲಿ ತನಿಖೆ ನಡೆಸಿ ವರದಿ ಪಡೆಯಲಾಗುವುದು ಎಂದು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ತಿಳಿಸಿದ್ದಾರೆ.
ಇದೇ ವೇಳೆ ಕಳಪೆ ಕಾಮಗಾರಿ ಸಾಬೀತಾದ್ರೆ, ಸಂಬಂಧಪಟ್ಟ ಅಧಿಕಾರಿಗಳು ಹಾಗೂ ಗುತ್ತಿಗೆದಾರರ ವಿರುದ್ಧ ಕ್ರಮ ಕೈಗೊಳ್ಳುತ್ತೆವೆ.
ಸದ್ಯ, ಪಾಲಿಕೆ ಅಧಿಕಾರಿಗಳು ಸ್ಥಳ ಪರಿಶೀಲನೆ ನಡೆಸಿದ್ದಾರೆ. ಅವ್ರಿಂದ ಬಂದ ವರದಿಯನ್ನು ರಾಜ್ಯ ಸರ್ಕಾರ ಮತ್ತು ಪ್ರಧಾನಿ ಕಚೇರಿಗೆ ಕಳುಹಿಸಲಾಗುತ್ತದೆ ಎಂದು ತುಷಾರ್ ಹೇಳಿದರು. ಕಾಮಗಾರಿ ನಿರ್ವಹಿಸಿದ್ದ ಬಿಬಿಎಂಪಿಯ ಮೂವರು ಇಂಜಿನಿಯರ್ಗಳಿಗೆ ಬಿಬಿಎಂಪಿ ಶೋಕಾಸ್ ನೋಟಿಸ್ ಕೊಟ್ಟಿತ್ತು.
PublicNext
24/06/2022 02:26 pm