ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ತಿಂಗಳಲ್ಲಿ 15 ದಿನ ಅರಣ್ಯದಲ್ಲಿರಿ : ಅರಣ್ಯ ಇಲಾಖೆ ಅಧಿಕಾರಿಗಳಿಗೆ ಸಿಎಂ ಬೊಮ್ಮಾಯಿ ತಾಕೀತು

ಬೆಂಗಳೂರು - ಅರಣ್ಯ ಇಲಾಖೆಯ ಪ್ರಧಾನ ಕಾರ್ಯದರ್ಶಿ ಗಳಿಂದ ಹಿಡಿದು ಜಿಲ್ಲಾ ಅರಣ್ಯ ಸಂರಕ್ಷಣಾಧಿಕಾರಿಗಳವರೆಗಿನ. ಎಲ್ಲಾ ಹಂತದ ಅಧಿಕಾರಿಗಳು ಕಚೇರಿಗಳನ್ನು ಬಿಟ್ಟು ತಿಂಗಳಿಗೆ 15 ದಿನ ಅರಣ್ಯದಲ್ಲಿರಬೇಕು ಎಂದು ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸೂಚಿಸಿದರು.

ಅವರು ಇಂದು ಕರ್ನಾಟಕ ಅರಣ್ಯ ಅಭಿವೃದ್ಧಿ ನಿಗಮ ನಿಯಮಿತ ವತಿಯಿಂದ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‍ನಲ್ಲಿ ಆಯೋಜಿಸಿದ್ದ ನಿಗಮದ ಸುವರ್ಣ ಮಹೋತ್ಸವ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು. ಹಿರಿಯ ಅಧಿಕಾರಿಗಳು ಬೆಂಗಳೂರಿನಲ್ಲಿ ಬೀಡು ಬಿಟ್ಟಿದ್ದೀರಿ. ಕಚೇರಿ ಬಿಟ್ಟು ಹೊರಗೇ ಬರ್ತಿಲ್ಲ. ಅರಣ್ಯ ಕ್ಕೆ ಹೋಗಿ. ತಿಂಗಳಲ್ಲಿ 15 ದಿನ ಅರಣ್ಯದಲ್ಲಿ ಇದ್ಧರೆ ಉಳಿದ ಸಿಬ್ಬಂದಿಗೆ ಆತ್ಮಸ್ಥೈರ್ಯ ಬರುತ್ತದೆ. ಅವರಿಗೆ ಮಾರ್ಗದರ್ಶನ ಸಿಗುತ್ತದೆ. ಹಿರಿಯ ಅಧಿಕಾರಿಗಳು ಅರಣ್ಯ ಕಾಪಾಡುವ ಕೆಲಸದಲ್ಲಿ ಇದ್ದಾರೆ ಎಂಬ ಭಾವನೆ ಬರುತ್ತದೆ. ಹೀಗಾಗಿ ೧೫ ದಿನ ಅರಣ್ಯದಲ್ಲಿ ಇರಿ ಎಂದು ಸಿಎಂ ಬಸವರಾಜ ಬೊಮ್ಮಾಯಿ ಸೂಚನೆ ನೀಡಿದರು.

ಪ್ರಸ್ತುತ ಶೇ 23 ರಷ್ಟಿರುವ ಅರಣ್ಯ ಪ್ರದೇಶವನ್ನು ಐದು ವರ್ಷಗಳಲ್ಲಿ ಕನಿಷ್ಠ ಶೇ 30ಕ್ಕೆ ಹೆಚ್ವಿಸಲು ಪ್ರಯತ್ನಿಸಬೇಕೆಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಗಂಧದ ಮರಗಳನ್ನು ಬೆಳೆಸಲು ವಿಶೇಷ ಕಾರ್ಯಕ್ರಮ ರೂಪಿಸಲಾಗಿದೆ. ರೈತರು ಬೆಳೆದು ಅದರಿಂದ ಆದಾಯ ಪಡೆದುಕೊಳ್ಳಯುವಂತಾಗಬೇಕು. ಗಂಧದ ಮರ ಕಳ್ಳತನ ನಿಲ್ಲಿಸಲು ಹೆಚ್ಚಾಗಿ ಬೆಳೆಯಬೇಕು ಹಾಗೂ ಹಲವಾರು ವರ್ಷಗಳಿಂದ ಇರುವ ಕಟ್ಟುಪಾಡುಗಳನ್ನು ಸಡಿಲಗೊಳಿಸಬೇಕೆಂದು ಸೂಚನೆ ನೀಡಿದ್ದೇನೆ ಎಂದರು.

ಆಗ್ರೋ ಫಾರೆಸ್ಟ್ರಿ ಅತಿ ಹೆಚ್ಚಿನ ಆದ್ಯತೆ ನೀಡಿ

ಆಗ್ರೋ ಫಾರೆಸ್ಟ್ರಿ ಅರಣ್ಯ ಇಲಾಖೆಯ ಕಾರ್ಯಕ್ರಮಗಳಲ್ಲಿ ತಳಮಟ್ಟದಲ್ಲಿದೆ. ಅದಕ್ಕೆ ಆದ್ಯತೆ ನೀಡಬೇಕು. ರೈತ ಮಾತ್ರ ಪರಿಸರವನ್ನು ಉಳಿಸಲು ಸಾಧ್ಯ. ಭೂಮಿಯ ಜೊತೆಗೆ ನಿರಂತರವಾಗಿ ಸಂಪರ್ಕವಿರುವವನು ರೈತ. ರೈತರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಆಗ್ರೋ ಫಾರೆಸ್ಟ್ರಿ ಯತ್ತ ಗಮನ ಹರಿಸಬೇಕು. ಮಣ್ಣಿನ ಸಂರಕ್ಷಣೆಗೆ ಆಗ್ರೋ ಫಾರೆಸ್ಟ್ರಿ ಯಿಂದ ಸಾಧ್ಯ. ವನಮಹೋತ್ಸವಕ್ಕೆ 13 ಲಕ್ಷ ಸಸಿಗಳನ್ನು ನೆಡಲಾಗುತ್ತಿರುವುದು ಸ್ವಾಗತಾರ್ಹ. ಇದನ್ನು ಇನ್ನಷ್ಟು ಹೆಚ್ಚಿಸಬೇಕು. ಸಸಿಗಳ ಉತ್ಪಾದನೆಯೂ ರಾಜ್ಯದಲ್ಲಿ ಹೆಚ್ಚಾಗಬೇಕು. ಆಗ ಮಾತ್ರ ಅರಣ್ಯ ಪ್ರದೇಶವನ್ನು ಹೆಚ್ಚಿಸಬಹುದು. ಸಸಿಗಳ ಸಂಖ್ಯೆ ಹೆಚ್ಚಾದಾಗ ಅವುಗಳನ್ನು ನೆಟ್ಟು ಉಳಿಸಲು ಅಗತ್ಯವಿರುವ ಯೋಜನೆಯನ್ನು ರೂಪಿಸೋಣ. ಎನ್.ಆರ್. ಇ. ಜಿ.ಎ ಯೋಜನೆಗಳನ್ನು ಸಂಯೋಜಿಸುವ ನಿಟ್ಟಿನಲ್ಲಿ ಕೆಲಸ ಮಾಡಬೇಕು ಎಂದರು.

ಅರಣ್ಯ ಇಲಾಖೆ ಹಾಗೂ ಅರಣ್ಯ ಸಂರಕ್ಷಕರ ಸೇವಾ ವಿಚಾರಗಳನ್ನು ಪರಿಗಣಿಸಿ ಅಗತ್ಯ ಸಹಕಾರವನ್ನು ಸರ್ಕಾರ ನೀಡಲಿದೆ ಎಂದು ತಿಳಿಸಿದರು.

Edited By : Nirmala Aralikatti
Kshetra Samachara

Kshetra Samachara

25/06/2022 07:46 pm

Cinque Terre

1.56 K

Cinque Terre

0

ಸಂಬಂಧಿತ ಸುದ್ದಿ