ದೊಡ್ಡಬಳ್ಳಾಪುರ : ಎಸ್ ಎಸ್ ಎಲ್ ಸಿ ಮತ್ತು ಪಿಯುಸಿ ಪರೀಕ್ಷಾ ಫಲಿತಾಂಶದಲ್ಲಿ ಶೇ. 85ಕ್ಕೂ ಹೆಚ್ಚು ಅಂಕ ಗಳಿಸಿದ 1700ಕ್ಕೂ ಅಧಿಕ ವಿದ್ಯಾರ್ಥಿಗಳನ್ನು ಅಂಜನಾದ್ರಿ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಪುರಸ್ಕರಿಸಲಾಯಿತು.
ದೊಡ್ಡಬಳ್ಳಾಪುರ ನಗರದ ಸಿದ್ದನಾಯನಹಳ್ಳಿಯಲ್ಲಿ ಬೃಹತ್ ವಿದ್ಯಾರ್ಥಿಗಳ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಅಯೋಜಿಸಲಾಗಿತ್ತು. ಬಿಜೆಪಿ ಫಲಾನುಭವಿಗಳ ಪ್ರಕೋಷ್ಠ ಹಾಗೂ ಅಂಜನಾದ್ರಿ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. ಸಚಿವರಾದ ಡಾ.ಕೆ.ಸುಧಾಕರ್, ಆರ್. ಅಶೋಕ್, ಬಿಡಿಎ ಅಧ್ಯಕ್ಷ ಎಸ್ ಆರ್ ವಿಶ್ವನಾಥ್, ಹಿರಿಯೂರು ಶಾಸಕಿ ಪೂರ್ಣಿಮ ಮುಖ್ಯ ಅತಿಥಿಗಳಾಗಿದ್ದರು.
ಬಿಜೆಪಿ ಫಲಾನುಭವಿಗಳ ಪ್ರಕೋಷ್ಠ ಬೆಂಗಳೂರು ಗ್ರಾಮಾಂತರ ಜಿಲ್ಲೆ ಅಧ್ಯಕ್ಷ ಧೀರಜ್ ಮುನಿರಾಜು ತಮ್ಮ ಅಂಜನಾದ್ರಿ ಚಾರಿಟೇಬಲ್ ಟ್ರಸ್ಟ್ ಮೂಲಕ ಬಡ ಪ್ರತಿಭಾವಂತ ವಿದ್ಯಾರ್ಥಿಗಳ ಕಲಿಕೆಗೆ ನೆರವಾಗುತ್ತಿದ್ದಾರೆ. ತಾಲೂಕಿನ SSLC, PUC ಪರೀಕ್ಷೆಯಲ್ಲಿ ಶೇ. 85ಕ್ಕಿಂತ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳನ್ನು ಗುರುತಿಸಿ ಪ್ರೋತ್ಸಾಹಿಸುತ್ತಿದ್ದಾರೆ.
1400 ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡುವುದಾಗಿ ಹೇಳಲಾಗಿತ್ತು. ಆದರೆ, ಕಾರ್ಯಕ್ರಮದ ದಿನ ಹೆಚ್ಚುವರಿ ವಿದ್ಯಾರ್ಥಿಗಳು ಪ್ರತಿಭಾ ಪುರಸ್ಕಾರಕ್ಕೆ ಒಳಗಾದ್ರು. ಒಟ್ಟು 1700ಕ್ಕೂ ಅಧಿಕ ವಿದ್ಯಾರ್ಥಿಗಳನ್ನ ಸನ್ಮಾನಿಸಿ ಬ್ಯಾಗ್, ಪ್ರೋತ್ಸಾಹ ಧನ ನೀಡಲಾಯಿತು ಮತ್ತು ವಿದ್ಯಾರ್ಥಿಗಳು ಕಾಲೇಜ್ ನಲ್ಲಿ ಕಟ್ಟಬೇಕಾದ ಸರ್ಕಾರಿ ಶುಲ್ಕವನ್ನು ಟ್ರಸ್ಟ್ ವತಿಯಿಂದಲೇ ಪಾವತಿ ಮಾಡಲಾಗುತ್ತದೆ.
PublicNext
26/06/2022 06:55 pm