ಬೆಂಗಳೂರು: ಅಗ್ನಿಪಥ್ ಯೋಜನೆ ವಿರೋಧಿಸಿ ಕಾಂಗ್ರೆಸ್ ವತಿಯಿಂದ ಇಂದು ಬೆಂಗಳೂರಿನ ಎಲ್ಲಾ ಕಡೆ ಬೃಹತ್ ಪ್ರತಿಭಟನೆ ನಡೆದಿದೆ. ಬಿಟಿಎಂ ಲೇಔಟ್ ಶಾಸಕರಾದ ರಾಮಲಿಂಗಾರೆಡ್ಡಿ ನೇತೃತ್ವದಲ್ಲಿ ಹೊಸೂರು ರಸ್ತೆ ಮಡಿವಾಳದಲ್ಲಿ ಇಂದು ಪ್ರತಿಭಟನೆ ಮಾಡಲಾಯಿತು.
ಕೇಂದ್ರ ಸರ್ಕಾರದ ಅಗ್ನಿಪಥ್ ಯೋಜನೆಯನ್ನು ಖಂಡಿಸಿ ಹಲವು ಕಾಂಗ್ರೆಸ್ ಮುಖಂಡರು ಮತ್ತು ಕಾರ್ಯಕರ್ತರು ಪ್ರತಿಭಟನೆ ಮಾಡಿದ್ದಾರೆ. ಪ್ರತಿಭಟನೆಯಲ್ಲಿ ಬಿಟಿಎಂ ಲೇಔಟ್ ನಲ್ಲಿ ನಡೆದ ಪ್ರತಿಭಟನೆಯಲ್ಲಿ ಶಾಸಕ ರಾಮಲಿಂಗಾರೆಡ್ಡಿ ಜೊತೆ ಬಿಬಿಎಂಪಿ ಮಾಜಿ ಮಹಾಪೌರರಾದ ಮಂಜುನಾಥ್ ರೆಡ್ಡಿ ಮತ್ತು ಬಿಬಿಎಂಪಿ ಕಾಂಗ್ರೆಸ್ ಕಾರ್ಪೋರೇಟರ್ ಗಳು ಕಾರ್ಯಕರ್ತರು ಪಾಲ್ಗೊಂಡಿದ್ದರು.
-ನವೀನ್, ಪಬ್ಲಿಕ್ ನೆಕ್ಸ್ಟ್, ಬೆಂಗಳೂರು
Kshetra Samachara
27/06/2022 04:21 pm