ಬೆಂಗಳೂರು: ನಗರದ ಸ್ವಾಸ್ಥ್ಯ ಮತ್ತು ಸ್ವಚ್ಛತೆ ಕಾಪಾಡುವಲ್ಲಿ ಅತಿ ಮುಖ್ಯ ಪಾತ್ರ ವಹಿಸುತ್ತಿರುವ ಪೌರ ಕಾರ್ಮಿಕರ ಬೇಡಿಕೆಗಳನ್ನು ಸರ್ಕಾರ ಎರಡು ದಿನಗಳೊಳಗಾಗಿ ಈಡೇರಿಸಬೇಕು. ಇಲ್ಲವಾದರೆ, ಸೋಮವಾರದಿಂದ ನಾನೂ ಪ್ರತಿಭಟನೆಯಲ್ಲಿ ಭಾಗವಹಿಸಿ, ಬೇಡಿಕೆಗಳು ಈಡೇರುವವರೆಗೂ ಇಲ್ಲೇ ಊಟ, ತಿಂಡಿ ಮಾಡುತ್ತೇನೆ. ಇಲ್ಲೇ ಮಲಗುತ್ತೇನೆ ಎಂದು ಚಾಮರಾಜಪೇಟೆ ಶಾಸಕರು ಹಾಗೂ ಮಾಜಿ ಸಚಿವ ಜಮೀರ್ ಅಹ್ಮದ್ ಖಾನ್ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.
ವಿವಿಧ ಬೇಡಿಕೆಗಳನ್ನು ಮುಂದಿಟ್ಟುಕೊಂಡು ಬಿಬಿಎಂಪಿ ಪೌರ ಕಾರ್ಮಿಕರು ಕಳೆದ ಎರಡು ದಿನಗಳಿಂದ ಫ್ರೀಡಂ ಪಾರ್ಕ್‌ನಲ್ಲಿ ನಡೆಸುತ್ತಿರುವ ಪ್ರತಿಭಟನೆಯಲ್ಲಿ ಇಂದು ಭಾಗವಹಿಸಿ ಅವರು ಮಾತನಾಡಿದರು.
ನಮ್ಮ ಪಕ್ಷದ ನಾಯಕ ಸಿದ್ದರಾಮಯ್ಯ ಅವರಿಗೆ ಪೌರ ಕಾರ್ಮಿಕರ ಬಗ್ಗೆ ಅಪಾರ ಕಾಳಜಿ ಇದೆ. ನಿಮ್ಮ ಕಷ್ಟ, ನೋವುಗಳು ನಮ್ಮ ಕಷ್ಟ, ನೋವುಗಳಿದ್ದಂತೆ. ಇಂದು ಸಂಜೆ 4 ಗಂಟೆಗೆ ಅವರು ಇಲ್ಲಿಗೆ ಬಂದು ನಿಮ್ಮ ಕೂಗಿಗೆ ಸಾಥ್ ನೀಡಲಿದ್ದಾರೆ. ನಿಮಗೆ ನ್ಯಾಯ ಸಿಗುವವರೆಗೂ ನಮ್ಮ ಹೋರಾಟ ಮುಂದುವರಿಯುತ್ತದೆ ಎಂದು ಪ್ರತಿಭಟನಾಕಾರರನ್ನು ಉದ್ದೇಶಿಸಿ ಶಾಸಕ ಜಮೀರ್ ಅಹ್ಮದ್ ಖಾನ್ ಮಾತನಾಡಿದರು.
ನವೀನ್ ಪಬ್ಲಿಕ್ ನೆಕ್ಸ್ಟ್, ಬೆಂಗಳೂರು
PublicNext
02/07/2022 04:19 pm