ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಂಗಳೂರು: ನಿಷ್ಪಕ್ಷಪಾತವಾದ ತನಿಖೆ ಮೂಲಕ ಇಡೀ ವ್ಯವಸ್ಥೆ ಸ್ವಚ್ಛಗೊಳಿಸಲು ಬದ್ಧ:ಸಿಎಂ

ಬೆಂಗಳೂರು: ನಿಷ್ಪಕ್ಷಪಾತವಾದ ಹಾಗೂ ನಿರ್ದಾಕ್ಷಿಣ್ಯವಾದ ತನಿಖೆಯನ್ನು ಮಾಡುವ ಮೂಲಕ ಇಡೀ ವ್ಯವಸ್ಥೆಯನ್ನು ಸ್ವಚ್ಛಗೊಳಿಸಲು ಸರ್ಕಾರ ಬದ್ಧವಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ಅವರು ಇಂದು ಕಬ್ಬನ್ ಪಾರ್ಕ್‍ನ ಸರ್ಕಾರಿ ಮತ್ಸ್ಯಾಲಯದ ಬಳಿ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದ್ದು,

ಪಿಎಸ್‌ಐ ನೇಮಕಾತಿ ಹಗರಣದ ತನಿಖೆ ನಡೆಸಲು ಸಿಐಡಿಯವರಿಗೆ ಮುಕ್ತವಾದ ಅವಕಾಶವನ್ನು ನೀಡಲಾಗಿದೆ. ಸಾಕ್ಷ್ಯ ಆಧಾರಗಳ ಮೇಲೆ ಕ್ರಮಗಳನ್ನು ತೆಗೆದುಕೊಂಡಿದ್ದಾರೆ.

ಎಷ್ಟೇ ದೊಡ್ಡ ಅಧಿಕಾರಿಗಳಾಗಿದ್ದರೂ ನಮ್ಮ ಸರ್ಕಾರ ಅವರ ವಿರುದ್ಧ ಕ್ರಮ ತೆಗೆದುಕೊಳ್ಳುತ್ತದೆ. ಹಿಂದಿನ ಸರ್ಕಾರಗಳ ಅವಧಿಯಲ್ಲಿ ಹಗರಣದ ಕೂಗು ಕೇಳಿಬಂದಿದ್ದರೂ , ಯಾವುದೇ ತನಿಖೆ ನಡೆದಿರಲಿಲ್ಲ ಎಂದು ಸಿಎಂ ಬೊಮ್ಮಾಯಿ ಹೇಳಿದರು.

Edited By : Shivu K
Kshetra Samachara

Kshetra Samachara

04/07/2022 09:37 pm

Cinque Terre

2.94 K

Cinque Terre

0

ಸಂಬಂಧಿತ ಸುದ್ದಿ