ದೊಡ್ಡಬಳ್ಳಾಪುರ: ರಾಜ್ಯದಲ್ಲಿ ಒಂದೇ ದಿನ ಭ್ರಷ್ಟಚಾರಕ್ಕೆ ಸಂಬಂಧಿಸಿದಂತೆ ಐಪಿಎಸ್ ಮತ್ತು ಐಎಎಸ್ ಅಧಿಕಾರಿಗಳನ್ನ ಎಸಿಬಿ ಅಧಿಕಾರಿಗಳು ಬಂಧಿಸಿದ್ದು ರಾಜ್ಯ ಮಾಹಿತಿ ಹಕ್ಕು ಮತ್ತು ಸಾಮಾಜಿಕ ಕಾರ್ಯಕರ್ತರ ವೇದಿಕೆಯ ಕಾರ್ಯಕರ್ತರು ಸಿಹಿ ಹಂಚಿ ಸಂಭ್ರಮಿಸಿದ್ದಾರೆ.
ಪಿಎಸ್‌ಐ ನೇಮಕಾತಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಎಡಿಜಿಪಿ ಅಮೃತ್ ಪಾಲ್ ಮತ್ತು ಲಂಚ ಪಡೆದ ಆರೋಪ ಮೇಲೆ ಬೆಂಗಳೂರು ನಗರ ಮಾಜಿ ಜಿಲ್ಲಾಧಿಕಾರಿ ಮಂಜುನಾಥ್‌ರನ್ನ ಎಸಿಬಿ ಅಧಿಕಾರಿಗಳು ವಿಚಾರಣೆಗಾಗಿ ಬಂಧಿಸಿದ್ದಾರೆ. ಐಎಎಸ್ ಮತ್ತು ಐಪಿಎಸ್ ಅಧಿಕಾರಿಗಳ ಬಂಧನ ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ಯ ಮಾಹಿತಿ ಹಕ್ಕು ಮತ್ತು ಸಾಮಾಜಿಕ ಕಾರ್ಯಕರ್ತರ ವೇದಿಕೆ ಕಾರ್ಯಕರ್ತರು ಸಂಭ್ರಮಿಸಿದರು.
ನಗರದ ಪ್ರವಾಸಿ ಮಂದಿರದಲ್ಲಿ ಪರಸ್ಪರ ಸಿಹಿ ಹಂಚಿ ಸಂಭ್ರಮಿಸಿದ ರಾಜ್ಯ ಮಾಹಿತಿ ಹಕ್ಕು ಮತ್ತು ಸಾಮಾಜಿಕ ಕಾರ್ಯಕರ್ತರ ವೇದಿಕೆಯ ಕಾರ್ಯಕರ್ತರು ರಾಜ್ಯದಲ್ಲಿದ್ದ ಲೋಕಾಯುಕ್ತ ಮುಳುಗಿಸಿ ಎಸಿಬಿ ತಂದಿದ್ದು ಭ್ರಷ್ಟರಿಗೆ ಸಹಕಾರಿಯಾಗಿದೆ. ಇವತ್ತಿನ ಸರ್ಕಾರಗಳು, ಭ್ರಷ್ಟ ಅಧಿಕಾರಿಗಳಿಂದ ಜನ ಸಾಮಾನ್ಯರ ಬದುಕು ದುಸ್ತರವಾಗಿದೆ ಇಂತಹ ಭ್ರಷ್ಟ ಅಧಿಕಾರಿಗಳ ಬಂಧನದಿಂದ ಭ್ರಷ್ಟಾಚಾರಕ್ಕೆ ಕೊಂಚ ಕಡಿವಾಣ ಬೀಳಬಹುದು ಎಂದರು.
PublicNext
05/07/2022 08:10 pm