ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕೆ.ಹೆಚ್. ಮುನಿಯಪ್ಪ ಕಾಂಗ್ರೆಸ್ ತೊರೆದು ಜೆಡಿಎಸ್ ಸೇರ್ಪಡೆ ಕೇವಲ ವದಂತಿ

ದೊಡ್ಡಬಳ್ಳಾಪುರ: ಕಾಂಗ್ರೆಸ್ ಹಿರಿಯ ಮುಖಂಡ ಕೆ.ಎಚ್.ಮುನಿಯಪ್ಪ‌ ಅವರು ಕಾಂಗ್ರೆಸ್ ತೊರೆದು ಜೆಡಿಎಸ್ ಸೇರಲಿದ್ದಾರೆ ಎಂಬುದು ಕೇವಲ ವದಂತಿ‌. ಕಾರ್ಯಕರ್ತರು ಇಂಥ ವದಂತಿಗಳಿಗೆ ಕಿವಿಗೊಡಬಾರದು ಎಂದು ಕರ್ನಾಟಕ ಕೆ.ಎಚ್.ಮುನಿಯಪ್ಪ‌ ಅಭಿಮಾನಿಗಳ‌ ಸಂಘದ ಅಧ್ಯಕ್ಷ ಮಹೇಶ್ ಕುಮಾರ್ ನಗರದಲ್ಲಿ ಹೇಳಿದರು.

ಮುನಿಯಪ್ಪ ಅವರು ಕೋಲಾರ, ಚಿಕ್ಕಬಳ್ಳಾಪುರ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ‌ ಪಕ್ಷ ಸಂಘಟನೆಗೆ‌ ಹಗಲಿರುಳು ಶ್ರಮಿಸಿದ್ದಾರೆ. ಕಷ್ಟದ ಸಮಯದಲ್ಲೂ ಸಹ ಕಾಂಗ್ರೆಸ್ ಕೈ ಹಿಡಿದಿದ್ದಾರೆ. ಅವರ ಅಭಿಮಾನಿಗಳಾಗಿ ನಾವೆಲ್ಲರೂ ಅವರ ಜೊತೆಯಲ್ಲಿದ್ದೇವೆ. ರಾಜ್ಯದಲ್ಲಿರುವ 90 ಲಕ್ಷಕ್ಕೂ ಹೆಚ್ಚು ಪರಿಶಿಷ್ಟ‌ ಸಮುದಾಯದ ಬೆಂಬಲ‌ ಮುನಿಯಪ್ಪ ಅವರಿಗಿದೆ. ರಾಜ್ಯದ ಯಾವುದೇ ಕ್ಷೇತ್ರದಲ್ಲಿ ಸ್ಪರ್ಧಿಸಿದರೂ ಅವರನ್ನು ಗೆಲ್ಲಿಸಲಾಗುವುದು. ಚುನಾವಣೆಯಲ್ಲಿ ಗೆದ್ದು ಉನ್ನತ ಸ್ಥಾನಕ್ಕೆ ಏರುವ ವಿಶ್ವಾಸ ನಮಗಿದೆ.

ಮಾಧ್ಯಮಗಳಲ್ಲಿ‌ ಪ್ರಸಾರವಾಗುತ್ತಿರುವ ಸುದ್ದಿಗೆ ಯಾರೂ ಕಿವಿಗೊಡಬಾರದು ಎಂದು ಮನವಿ‌ ಮಾಡಿದರು. ದೊಡ್ಡಬಳ್ಳಾಪುರ ಕ್ಷೇತ್ರದಲ್ಲೂ ಶಾಸಕ ವೆಂಕಟರಮಣಯ್ಯ ಅವರನ್ನು ಮೂರನೇ ಬಾರಿಗೆ ಗೆಲ್ಲಿಸಲು ಕೆ.ಎಚ್.ಮುನಿಯಪ್ಪ‌ ಅಭಿಮಾನಿಗಳ‌ ಸಂಘದಿಂದ ಶ್ರಮಿಸಲಾಗುವುದು. ಭೋವಿ, ಕೊರಚ, ಹೊಲೆಯ ಹಾಗೂ ಮಾದಿಗ ಸಮುದಾಯದ ಎಲ್ಲರೂ ಶಾಸಕರ ಪರ ಕೆಲಸ‌ ಮಾಡಲಿದ್ದೇವೆ ಎಂದರು.

ಕಾಂಗ್ರೆಸ್ ಸೇವಾದಳದ ಜಿಲ್ಲಾ ಅಧ್ಯಕ್ಷ ಕಾಂತರಾಜು ಮಾತನಾಡಿ, ಕೆ.ಎಚ್.ಮುನಿಯಪ್ಪ‌ ಪಕ್ಷ ತ್ಯಜಿಸಲಿದ್ದಾರೆ ಎಂಬುದು ಸುಳ್ಳು ಸುದ್ದಿ. ನಾವು ಹುಟ್ಟುವ ಮೊದಲಿನಿಂದಲೂ ಮುನಿಯಪ್ಪ ಹಾಗೂ ಖರ್ಗೆ ಅವರು ಕಾಂಗ್ರೆಸ್ ಪಕ್ಷಕ್ಕಾಗಿ ಅವಿರತ ಶ್ರಮಿಸಿದ್ದಾರೆ. ಈ ಇಬ್ಬರೂ ನಾಯಕರು ಯಾವುದೇ ಒಂದು ಸಮುದಾಯಕ್ಕೆ‌ ಸೀಮಿತರಲ್ಲ. ಎಲ್ಲ ನಾಯಕರನ್ನು ಒಟ್ಟಿಗೆ ಕರೆದುಕೊಂಡು ಹೋಗುತ್ತಿದ್ದಾರೆ. ದೊಡ್ಡಬಳ್ಳಾಪುರದಲ್ಲೂ ಕೂಡ ಶಾಸಕರ ಪರ ಕೆ.ಎಚ್. ಅಭಿಮಾನಿಗಳ ಸಂಘ ಕೆಲಸ‌ ಮಾಡಲಿದೆ ಎಂದು ಹೇಳಿದರು.

Edited By : PublicNext Desk
Kshetra Samachara

Kshetra Samachara

05/07/2022 10:25 pm

Cinque Terre

3.61 K

Cinque Terre

0

ಸಂಬಂಧಿತ ಸುದ್ದಿ