ಬೆಂಗಳೂರು: ನಿರಂತರ ಭಾರಿ ಮಳೆಯಿಂದಾಗಿ ಹಾನಿಗೊಳಗಾದ ಪ್ರದೇಶಗಳಿಗೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿಗಳೊಂದಿಗೆ ಮಾತನಾಡಿದ್ದು, ರಕ್ಷಣಾ ಹಾಗೂ ಪರಿಹಾರ ಕಾರ್ಯಗಳನ್ನು ಕೈಗೊಳ್ಳಲು ಸೂಚಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಕರಾವಳಿ ಮತ್ತು ಕೊಡಗು ಭಾಗಗಳಲ್ಲಿ ಮನೆಗಳಿಗೆ ಹಾನಿಯುಂಟಾಗಿರುವುದರಿಂದ ಎಸ್.ಡಿ.ಆರ್.ಎಫ್. ಮತ್ತು ಎನ್.ಡಿ.ಆರ್.ಎಫ್. ತಂಡವನ್ನು ನಿಯೋಜಿಸಿ ರಕ್ಷಣಾ ಕಾರ್ಯವನ್ನು ಮೊದಲು ಆದ್ಯತೆಯ ಮೇಲೆ ಕೈಗೊಳ್ಳಬೇಕು. ರಕ್ಷಣಾ ಕಾರ್ಯದ ನಂತರ ಪರಿಹಾರ ಕಾರ್ಯ ನಡೆಯಲಿದೆ ಎಂದರು.
ವರದಿ: ರಂಜಿತಾ ಸುನಿಲ್, ಪಬ್ಲಿಕ್ ನೆಕ್ಸ್ಟ್ ಬೆಂಗಳೂರು
PublicNext
06/07/2022 09:56 pm