ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಂಗಳೂರು: ರಾಜ್ಯದಲ್ಲಿ 13 ಜಿಲ್ಲೆಗಳಲ್ಲಿ ಪ್ರವಾಹ;ಡಿ.ಸಿ.ಗಳ ಜತೆ ವೀಡಿಯೋ ಕಾನ್ಫರೆನ್ಸ್ ನಡೆಸಿದ ಸಿಎಂ!

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು 13 ಜಿಲ್ಲೆಗಳ ಜಿಲ್ಲಾಧಿಕಾರಿಗಳೊಂದಿಗೆ ವೀಡಿಯೋ ಸಂವಾದ ನಡೆಸಿದರು. ಈ ಕುರಿತು ಮಾಧ್ಯಮದವರೊಂದಿಗೆ ಮಾತನಾಡಿದ ಮುಖ್ಯಮಂತ್ರಿಗಳು, ಕಳೆದ ಮೂರು ನಾಲ್ಕು ದಿನಗಳಿಂದ ಕರಾವಳಿ, ಮಲೆನಾಡು ಹಾಗೂ ಬಯಲು ಸೀಮೆಯಲ್ಲಿ ವಾಡಿಕೆಗಿಂತ ಅತಿ ಹೆಚ್ಚು ಮಳೆಯಾಗಿದ್ದು, ಜನ, ಜಾನುವಾರುಗಳಿಗೆ ತೊಂದರೆಯಾಗಿದೆ. 13 ಜಿಲ್ಲೆಗಳಲ್ಲಿ ತೀವ್ರ ಪ್ರವಾಹ ಪರಿಸ್ಥಿತಿ ಇದ್ದು, 17 ತಾಲ್ಲೂಕುಗಳಲ್ಲಿ ಮಳೆ ಹಾವಳಿ ಹೆಚ್ಚಾಗಿದೆ. ಇದುವರೆಗೂ ಜೂನ್ 1 ರಿಂದ ಈವರೆಗೆ 12 ಜನ ಮೃತಪಟ್ಟಿದ್ದು,65 ಜಾನುವಾರುಗಳಿಗೆ ಜೀವಹಾನಿಯಾಗಿದೆ ಎಂದು ತಿಳಿಸಿದರು.

ಈ ವರೆಗೂ ಮಳೆ ಹಾನಿಯಾದ ಲೆಕ್ಕ

ಗ್ರಾಫಿಕ್ಸ್ ಪ್ಲೇಟ್-

ಜೂನ್ 1 ರಿಂದ ಈವರೆಗೆ ಹಾನಿ ವಿವರ

ಕ್ರ.ಸಂ. ವಿವರ ಹಾನಿಯ ಪ್ರಮಾಣ (ಜೂನ್ 1ರಿಂದ ಈವರೆಗೆ)

1. ಪ್ರವಾಹಪೀಡಿತ ಜಿಲ್ಲೆಗಳ ಸಂಖ್ಯೆ 13

2. ತಾಲ್ಲೂಕುಗಳು 17

3. ಗ್ರಾಮಗಳು 37

4. ಬಾಧಿತ ಜನಸಂಖ್ಯೆ 495

5. ರಕ್ಷಿಸಲಾದ ಜನರ ಸಂಖ್ಯೆ 90

6. ತೆರೆಯಲಾಗಿರುವ ಕಾಳಜಿ ಕೇಂದ್ರಗಳು 4

7. ಕಾಳಜಿ ಕೇಂದ್ರದಲ್ಲಿ ಆಶ್ರಯ ಪಡೆದವರ ಸಂಖ್ಯೆ 90

8. ಮಾನವ ಜೀವ ಹಾನಿ 12

9. ಜಾನುವಾರು ಜೀವಹಾನಿ 65

ಮನೆ ಹಾನಿಯಾದಲ್ಲಿ ಭಾಗಶಃ ಅಥವಾ ನೀರು ನುಗ್ಗಿರುವ ಮನೆಗಳಿಗೆ ಮೊದಲು 10 ಸಾವಿರ ತುರ್ತು ಪರಿಹಾರ ಕೂಡಲೇ ನೀಡುವಂತೆ ಆದೇಶ ಮಾಡಿದ್ದು, ನಂತರ ಹಾನಿ ಪ್ರಮಾಣವನ್ನು ವರದಿಯನ್ನು 2-3 ದಿನಗಳಲ್ಲಿ ಜಿಲ್ಲಾ ಪಂಚಾಯತ್ ನ ಇಂಜಿನಿಯರ್ ಗಳಿಂದ ಪಡೆದು ನಿಯಮಾನುಸಾರ ಅಂದಾಜು ಮಾಡಿ, ವರ್ಗೀಕರಿಸಿ, ರಾಜೀವ್ ಗಾಂಧಿ ವಸತಿ ನಿಗಮದ ತಂತ್ರಾಂಶದಲ್ಲಿ ಅಪ್ ಲೋಡ್ ಮಾಡಿ ಪರಿಹಾರ ವಿತರಣೆಗೆ ಕ್ರಮ ಕೈಗೊಳ್ಳಲುಸೂಚಿಸಲಾಯಿತು.ಮಳೆ ಪ್ರಮಾಣ ಕಡಿಮೆಯಾದ ನಂತರ ಬೆಳೆ ಹಾನಿ ಸಮೀಕ್ಷೆ ನಡೆಸಿ, ವರದಿ ಸಲ್ಲಿಸಲು ಪಡೆದು ಪರಿಹಾರ ನೀಡುವಂತೆ ಸೂಚಿಸಲಾಯಿತು.

ವಿದ್ಯುತ್ ಕಂಬಗಳು ಬಿದ್ದು ಹೋದಲ್ಲಿ ಕೂಡಲೇ ಸರಿಪಡಿಸಿ, ವಿದ್ಯುತ್ ಸರಬರಾಜು ಅಡಚಣೆಯಾಗದಂತೆ ನೋಡಿಕೊಳ್ಳಲು ತಿಳಿಸಲಾಗಿದೆ. ಕಡಲ ಕೊರೆತ ಆದಲ್ಲಿ ತುರ್ತು ಕಾಮಗಾರಿ ಕೂಡಲೇ ಕೈಗೊಂಡು ಹೆಚ್ಚಿನ ಹಾನಿಯಾಗದಂತೆ ತಾತ್ಕಾಲಿಕವಾಗಿ ಕಡಲ ಕೊರೆತ ಆಗದಂತೆ ಕ್ರಮವಹಿಸಬೇಕು.

Edited By :
PublicNext

PublicNext

08/07/2022 09:13 pm

Cinque Terre

62.53 K

Cinque Terre

0

ಸಂಬಂಧಿತ ಸುದ್ದಿ