ಬೆಂಗಳೂರು: ರಾಜಧಾನಿಯಲ್ಲಿ ರೈತರು ಸರ್ಕಾರದ ವಿರುದ್ಧ ಸಿಡಿದೆದ್ದಿದ್ದಾರೆ. ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಬೇರೆ ಬೇರೆ ಜಿಲ್ಲೆಗಳಿಂದ ಕಬ್ಬು ಬೆಳೆಗಾರರು ಬೆಂಗಳೂರಿನ ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣಕ್ಕೆ ಆಗಮಿಸಿದ್ದಾರೆ.
ರೈಲ್ವೆ ನಿಲ್ದಾಣದ ಎದುರು ಜಮಾಯಿಸಿದ ನೂರಾರು ರೈತರು ಕೆಲಕಾಲ ಪ್ರತಿಭಟನೆ ನಡೆಸಿದ್ರು. ನಂತರ ಫ್ರೀಡಂ ಪಾರ್ಕ್ ಮೂಲಕ ಪ್ರತಿಭಟನಾ ಮೆರವಣಿಗೆ ನಡೆಸಿ ಸಿಎಂ ಮನೆಗೆ ಮುತ್ತಿಗೆ ಮುತ್ತಿಗೆ ಹಾಕಲು ತೆರಳುತ್ತಿದ್ದರು. ಆದರೆ ಪೊಲೀಸರು ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣದಲ್ಲಿಯೇ ರೈತರನ್ನ ತಡೆದು ವಶಕ್ಕೆ ಪಡೆದಿದ್ದಾರೆ.
PublicNext
11/07/2022 12:13 pm