ವರದಿ : ಗೀತಾಂಜಲಿ
ಬೆಂಗಳೂರು: ವಿದ್ಯಾರ್ಥಿಗಳಿಗೆ ಪೂರೈಸುವ ಟೂಲ್ ಕಿಟ್ ನಲ್ಲಿ 22 ಕೋಟಿ ಹಗರಣದಲ್ಲಿ ಸಚಿವ ಅಶ್ವತ್ ನಾರಾಯಣ್ ಕೈವಾಡವಿದೆ ಅಂತಾ ಅಮ್ ಆದ್ಮಿ ಪಕ್ಷದ ಮೋಹನ್ ದಾಸ್ ಆರೋಪ ಮಾಡಿದ್ರು.
ಪ್ರೆಸ್ ಕ್ಲಬ್ ನಲ್ಲಿ ಮಾತಾನಾಡಿದ ಮೋಹನ್ ದಾಸ್, ರಾಜ್ಯದ ಕೈಗಾರಿಕಾ ಕೇಂದ್ರಗಳಲ್ಲಿ ತರಬೇತಿ ಪಡೆಯುತ್ತಿರುವ ವಿದ್ಯಾರ್ಥಿಗಳಿಗೆ ಪೂರೈಸುವ ಸಲಕರಣೆಗಳ ಟೂಲ್ ಕಿಟ್ ಟೆಂಡರ್ ನಲ್ಲಿ ಗೋಲ್ಮಾಲ್ ನಡೆದಿದೆ.
ಇದರಲ್ಲಿ ಪರಿಶಿಷ್ಟ ಜಾತಿ ಮತ್ತು ಪಂಗಡಗಳ 13 ಸಾವಿರ ವಿದ್ಯಾರ್ಥಿಗಳಿಗೆ 22 ಕೋಟಿ ವೆಚ್ಚದಲ್ಲಿ ಟೂಲ್ ಖರೀದಿಸುವ ಟೆಂಡರ್ ಇದಾಗಿದ್ದು, ಈ ಟೆಂಡರ್ ಹಗರಣದಲ್ಲಿ ಸಚಿವ ಅಶ್ವಥ್ ನಾರಾಯಣ್ ನೇರ ಕೈವಾಡ ಇದೆ ಎಂದು ಮೋಹನ್ ದಾಸರಿ ವಾಗ್ದಾಳಿ ನಡೆಸಿದ್ರು.
PublicNext
11/07/2022 02:56 pm