ವರದಿ: ಗೀತಾಂಜಲಿ
ಬೆಂಗಳೂರು:ಮಾಜಿ ಸಿಎಂ ಸಿದ್ದರಾಮಯ್ಯ ಅವರ 75 ನೇ ವರ್ಷದ ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ಅಭಿಮಾನಿಗಳು ಅಮೃತ ಮಹೋತ್ಸವವನ್ನು ಆಚರಿಸಲು ನಿರ್ಧರಿಸಿದ್ದಾರೆ. ಇದೀಗ ಸಿದ್ದರಾಮೋತ್ಸವಕ್ಕೆ ಡಿ.ಕೆ.ಶಿವಕುಮಾರ್ ಬೆಂಬಲಿಗರು ಟಕ್ಕರ್ ನೀಡಿದ್ದು, ಶಿವಕುಮಾರೋತ್ಸವ ಮಾಡುವಂತೆ ಡಿ.ಕೆ.ಶಿವಕುಮಾರ್ ಬೆಂಬಲಿಗರಿಂದ ಒತ್ತಾಯ ಕೇಳಿ ಬಂದಿದೆ.
ಶಿವಕುಮಾರೋತ್ಸವ ಮಾಡುವಂತೆ ಕೆಪಿಸಿಸಿ ಮಾಧ್ಯಮ ವಿಭಾಗದ ಸಂಯೋಜಕ ಜಿ.ಸಿ.ರಾಜು ಪತ್ರ ಬರೆದಿದ್ದಾರೆ. ಸಿದ್ದರಾಮಯ್ಯರ 75 ನೇ ಅಮೃತ ಸಮಿತಿಯಿಂದ ಕಾರ್ಯಕ್ರಮ ನಡೆಯುತ್ತಿದ್ದು, ಅದೇ ಸಮಿತಿಯಿಂದ ಶಿವಕುಮಾರೋತ್ಸವ ಆಯೋಜಿಸುವಂತೆ ಒತ್ತಾಯ ಕೇಳಿ ಬಂದಿದೆ. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ 75 ನೇ ಹುಟ್ಟುಹಬ್ಬದ ಪ್ರಯುಕ್ತ ನಡೆಯುವ ಸಿದ್ದರಾಮೋತ್ಸವದಲ್ಲಿ ಎಐಸಿಸಿ ನಾಯಕ ರಾಹುಲ್ ಗಾಂಧಿ ಭಾಗಿಯಾಗುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.
Kshetra Samachara
13/07/2022 04:18 pm