ವರದಿ: ಗೀತಾಂಜಲಿ
ಬೆಂಗಳೂರು: ಎಸ್‌ಸಿ-ಎಸ್‌ಟಿ ವಿದ್ಯಾರ್ಥಿಗಳಿಗೆ ವಿತರಿಸುವ ಟೂಲ್ ಕಿಟ್ ಖರೀದಿ ಹಗರಣಕ್ಕೆ ಸಂಬಂಧಿಸಿ ರಾಜ್ಯದ ಜನರನ್ನು ವಂಚಿಸುತ್ತಿರುವ ಸಚಿವ ಅಶ್ವಥ್ ನಾರಾಯಣ್ ಅವರನ್ನು ತಕ್ಷಣವೇ ವಜಾಗೊಳಿಸಬೇಕು ಎಂದು ಆಮ್ ಆದ್ಮಿ ಪಾರ್ಟಿ ರಾಜ್ಯಾಧ್ಯಕ್ಷ ಪೃಥ್ವಿ ರೆಡ್ಡಿ ಆಗ್ರಹಿಸಿದ್ದಾರೆ .
"ನಾವು ಮಾಡಿರುವ ಆರೋಪಕ್ಕೆ ಉತ್ತರ ನೀಡಿರುವ ಸಚಿವ ಅಶ್ವಥ್ ನಾರಾಯಣ ಅವರು 5.27 ಕೋಟಿ ರೂ. ಉಳಿಸಿದ್ದೇವೆ ಎಂದು ನುಣುಚಿಕೊಳ್ಳುವ ಪ್ರಯತ್ನ ಮಾಡಿದ್ದಾರೆ. ನಿಜಾಂಶ ಏನೆಂದರೆ, ಏಕೈಕ ಬಿಡ್ಡರ್ ಇದ್ದಿದ್ದರಿಂದ ಮರು ಟೆಂಡರ್ ಮಾಡಿ, ಮೊದಲನೇ ಬಾರಿಯ ಪ್ರಕ್ರಿಯೆಯಲ್ಲಿ ಸೋತ ಕಂಪನಿಗೇ ಟೆಂಡರ್ ನೀಡಲಾಗಿದೆ' ಎಂದು ಪೃಥ್ವಿ ರೆಡ್ಡಿ ಗಂಭೀರ ಆರೋಪ ಮಾಡಿದ್ದಾರೆ.
Kshetra Samachara
14/07/2022 08:49 pm