ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಂಗಳೂರು: ಮಳೆಹಾನಿ ಸ್ಥಿತಿಗತಿ, ಪರಿಹಾರಗಳ ಬಗ್ಗೆ CMರವರು DCಗಳ ಜೊತೆಗಿನ ಸಭೆ ಮುಖ್ಯಾಂಶ!

ದೇವನಹಳ್ಳಿ:ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿರವರು ರಾಜ್ಯದ DC ಗಳ ಜೊತೆ ವೀಡಿಯೋ ಕಾನ್ಫರೆನ್ಸ್ ಮೂಲಕ ಮಳೆಹಾನಿ‌ ಪರಿಹಾರ ಕಾರ್ಯಗಳ ಸಭೆ ನಡೆಸಿದರು. ಈ ವೇಳೆ ಪ್ರಮುಖವಾಗಿ 6 ಅಂಶಗಳ ಬಗ್ಗೆ ಗಮನ ಹರಿಸಲಾಗಿದೆ. ಸಭೆಯ ಪ್ರಮುಖಾಂಶಗಳು ಇಂತಿವೆ.

1. ಮನೆಗಳಿಗೆ ತುರ್ತು ಪರಿಹಾರ 10 ಸಾವಿರ ರೂ.ಗಳನ್ನು ನೀಡಿ, ನಂತರ ಮನೆಗಳ ನಿರ್ಮಾಣವನ್ನು ಕೂಡಲೇ ಕೈಗೊಳ್ಳಬೇಕು.

2 . ರಸ್ತೆ, ಸೇತುವೆ ವಿದ್ಯುತ್ ಮುಂತಾದ ಮೂಲಭೂತ ಸೌಕರ್ಯ ದುರಸ್ತಿಗೆ ಆದ್ಯತೆ ನೀಡಿ

3. ಮಹಾರಾಷ್ಟ್ರದ ಕೋಯ್ನಾ ಜಲಾಶಯಗಳಿಂದ ನೀರಿನ ಮಟ್ಟದ ಬಗ್ಗೆ ನಿಗಾ ವಹಿಸಲು ಅಲ್ಲಿನ ಅಧಿಕಾರಿಗಳೊಂದಿಗೆ ಸಂಪರ್ಕದಲ್ಲಿರುವುದು.

4 . ಜಲಾಶಯಗಳಿಂದ ನೀರು ಹೊರಬಿಡುವ ಮುನ್ನ ಗ್ರಾಮಗಳಿಗೆ ಎಚ್ಚರಿಕೆ ನೀಡಿ ಜೀವ ಹಾನಿ ಅಥವಾ ಮನೆಗಳಿಗೆ ತೊಂದರೆಯಾಗದಂತೆ ಮುನ್ನಚ್ಚರಿಕೆ ವಹಿಸುವುದು. ಜನರ ಸ್ಥಳಾಂತರಕ್ಕೆ ಕ್ರಮ ವಹಿಸುವುದು.

5. ಎನ್.ಡಿ.ಆರ್.ಎಫ್ ಮಾರ್ಗಸೂಚಿಗಳ ಪ್ರಕಾರ ಹಾನಿಗೊಳಗಾಗಿರುವ ಮನೆಗಳ ನಿರ್ಮಾಣಕ್ಕೆ ಕೂಡಲೇ ಕ್ರಮ ತೆಗೆದುಕೊಳ್ಳುವುದು.

6. ಪ್ರವಾಹ ಪರಿಸ್ಥಿತಿಯನ್ನು ಗಂಭೀರವಾಗಿ ಪರಿಗಣಿಸಿ, ಎಲ್ಲಾ ಇಲಾಖೆಗಳೊಂದಿಗೆ ಸಮನ್ವಯ ಸಾಧಿಸಿ ಪರಿಹಾರ ಒದಗಿಸಬೇಕು.

7. ಬೆಳೆ ಹಾನಿ,ರಸ್ತೆ, ಮನೆಗಳ ಹಾನಿ ಬಗ್ಗೆ ಸಮೀಕ್ಷೆ ಸರಿಯಾಗಿ ಆಗಬೇಕು ಎಂದು ಮುಖ್ಯಮಂತ್ರಿಗಳು ಸೂಚನೆ ನೀಡಿದರು.

ಸುರೇಶ್ ಬಾಬು ಪಬ್ಲಿಕ್ ನೆಕ್ಸ್ಟ್ ದೇವನಹಳ್ಳಿ

Edited By :
Kshetra Samachara

Kshetra Samachara

15/07/2022 08:27 pm

Cinque Terre

1.31 K

Cinque Terre

0

ಸಂಬಂಧಿತ ಸುದ್ದಿ