ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಂಗಳೂರು: ಕೆ.ಆರ್ ಪುರದಲ್ಲಿ ಜಾತ್ಯತೀತ ಜನತಾದಳದಿಂದ ಜನತಾಮಿತ್ರ ಯಾತ್ರೆಗೆ ಚಾಲನೆ

ವರದಿ- ಬಲರಾಮ್. ವಿ

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರ ಆಡಳಿತಾವಧಿಯಲ್ಲಿನ ಯೋಜನೆಗಳನ್ನು ಮನೆ ಮನೆಗೆ ತಲುಪಿಸುವ ಉದ್ದೇಶದಿಂದ ಬೆಂಗಳೂರು ಪೂರ್ವ ತಾಲೂಕಿನ ಕೆ.ಆರ್ ಪುರದಲ್ಲಿ ಜನತಾಮಿತ್ರ ಯಾತ್ರೆಗೆ ಕೆಆರ್ ಪುರ ಜೆಡಿಎಸ್ ಪಕ್ಷದ ಕ್ಷೇತ್ರಾಧ್ಯಕ್ಷ ಸುರೇಶ್ ಚಾಲನೆ ನೀಡಿದರು.

ಬಳಿಕ ಮಾತನಾಡಿದ ಸುರೇಶ್ ಅವರು 2023ಕ್ಕೆ ಕರ್ನಾಟಕದಲ್ಲಿ ಕುಮಾರಸ್ವಾಮಿ ಅವರ ನೇತೃತ್ವದಲ್ಲಿ ಜಾತ್ಯಾತೀತ ಜನತಾದಳ ಪಕ್ಷವು ಮತ್ತೊಮ್ಮೆ ಅಧಿಕಾರಕ್ಕೆ ಬರಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಕ್ಷೇತ್ರದ ವಾರ್ಡ ಮಟ್ಟದಲ್ಲಿ ಪಕ್ಷವನ್ನು ಸಂಘಟಿಸುವಂತೆ ಈಗಾಗಲೇ ವಾರ್ಡ್ ಅಧ್ಯಕ್ಷರುಗಳಿಗೆ ಸೂಚಿಸಿರುವುದಾಗಿ ತಿಳಿಸಿದರು. ಕ್ಷೇತ್ರದಲ್ಲಿ ಸಮಸ್ಯೆಗಳನ್ನು ಎತ್ತಿಹಿಡಿಯುವ ಮೂಲಕ ಜನರಿಗೆ ಮನವರಿಕೆ ಮಾಡಲಾಗುವುದು ಎಂದು ಹೇಳಿದರು. ಈ ವೇಳೆ ಜೆಡಿಎಸ್ ಪಕ್ಷದ ನೂರಾರು ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

Edited By :
Kshetra Samachara

Kshetra Samachara

18/07/2022 07:54 pm

Cinque Terre

2.05 K

Cinque Terre

0

ಸಂಬಂಧಿತ ಸುದ್ದಿ