ನೆಲಮಂಗಲ: ಕರುನಾಡ ವಿಜಯಸೇನೆ ಸಂಘಟನೆ ನಾಡಿನ ಅಭಿವೃದ್ಧಿ, ಭಾಷೆ ಉಳಿವಿಗಾಗಿ ಹುಟ್ಟಿಕೊಂಡ ಸಂಘಟನೆಯಾಗಿದ್ದು, ದಾಬಸ್ ಪೇಟೆ ಕೈಗಾರಿಕಾ ಪ್ರದೇಶದ ಜ್ವಲಂತ ಸಮಸ್ಯೆಗಳಾದ ಸರೋಜಿನಿ ಮಹಿಷಿ ವರದಿ ಜಾರಿ, ಅಗ್ನಿಶಾಮಕ ಠಾಣೆ ನಿರ್ಮಾಣಕ್ಕೆ ಒತ್ತು ನೀಡಬೇಕು ಎಂದು ನೆಲಮಂಗಲ ತಾಲೂಕಿನ ದಾಬಸ್‌ಪೇಟೆ ಪಟ್ಟಣದ ಖಾಸಗಿ ಕಲ್ಯಾಣ ಮಂಟಪದಲ್ಲಿ ಕರುನಾಡ ವಿಜಯಸೇನೆ ಹಮ್ಮಿಕೊಂಡ ನೂತನ ಪದಾಧಿಕಾರಿಗಳ ಆಯ್ಕೆ ಮತ್ತು ಸೇರ್ಪಡೆ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಹಲವಾರು ಗಣ್ಯರ ಸಮ್ಮುಖದಲ್ಲಿ ಹೇಳಿದರು.
ಇದೇ ವೇಳೆ ವಿಜಯಸೇನೆ ಸಂಸ್ಥಾಪಕ ಅಧ್ಯಕ್ಷ ಹೆಚ್.ಎನ್.ದೀಪಕ್ ಮಾತನಾಡಿ, ನಮ್ಮ ಸಂಘಟನೆಯು ಸಮಾಜಮುಖಿ ಸಂಘಟನೆಯಾಗಿದ್ದು, ಸಂಘಟನೆಯನ್ನು ಬೆಳೆಸುವ ದೃಷ್ಟಿಯಿಂದ ಪ್ರತಿಯೊಂದು ಗ್ರಾಮ, ಹೋಬಳಿ ಮಟ್ಟದಲ್ಲಿ ಘಟಕಗಳನ್ನು ಸಂಘಟನೆಗಳನ್ನು ಆರಂಭಿಸುತ್ತಿದ್ದು ಗ್ರಾಮಗಳ ಅಭಿವೃದ್ಧಿಯಲ್ಲಿ ಸಂಘಟನೆಯನ್ನು ತೊಡಗಿಸಿಕೊಂಡು ಸಾಮಾಜಿಕ ಕೆಲಸ ಮಾಡುತ್ತೇವೆ. ಜಿಲ್ಲೆಯಲ್ಲೇ ಅತಿ ದೊಡ್ಡ ಕೈಗಾರಿಕಾ ವಲಯ ದಾಬಸ್ ಪೇಟೆಯಲ್ಲಿ ಕನ್ನಡಿಗರಿಗೆ ಉದ್ಯೋಗದಲ್ಲಿ ಆಗುತ್ತಿರುವ ಅನ್ಯಾಯದ ವಿರುದ್ಧ ಸರೋಜಿನಿ ಮಹಿಷಿ ವರದಿ ಜಾರಿಗೆ ಹಾಗೂ 5 ವಲಯಗಳಿಗೆ ಪ್ರತ್ಯೇಕ ಅಗ್ನಿ ಶಾಮಕ ಠಾಣೆ ಬಹಳ ಅವಶ್ಯವಿದೆ ಎಂದರು.
ಇನ್ನೂ ಬೆಂ.ಗ್ರಾ.ಜಿಲ್ಲಾಧ್ಯಕ್ಷ ಸುಚೀಂದ್ರನ್ ಮಾತನಾಡಿ, ಹೋಬಳಿ ಮಟ್ಟದಲ್ಲಿ ಸಂಘಟನೆ ಮಾಡಲು ಕರುನಾಡ ವಿಜಯಸೇನೆ ಸಂಘಟನೆ ನನ್ನನ್ನು ಗುರುತಿಸಿ ಜವಾಬ್ದಾರಿ ನೀಡಿದೆ. ನನ್ನ ಜವಾಬ್ದಾರಿಯನ್ನು ಸಮರ್ಥವಾಗಿ ನಿಭಾಯಿಸಿ ಜಿಲ್ಲೆಯಲ್ಲಿರುವ ಪ್ರಮುಖ ಸಮಸ್ಯೆಗಳ ವಿರುದ್ಧ ಹೋರಾಡಿ ಜನ್ರಿಗೆ ನ್ಯಾಯ ದೊರಕಿಸಿಕೊಡಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ. ಸಂಘಟನೆ ಯಾವುದೇ ರಾಜಕೀಯ ಪಕ್ಷಕ್ಕೆ ಸೀಮಿತಗೊಂಡಿಲ್ಲ. ಗ್ರಾಮ ಹಾಗೂ ಹೋಬಳಿ ಘಟಕದ ಪದಾಧಿಕಾರಿಗಳು ಯಾವುದೇ ಜಾತಿ, ಹಣ, ಆಮಿಷಗಳಿಗೆ ಒಳಗಾಗದೆ ಸಮಾಜದ ಕಟ್ಟಕಡೆಯ ವ್ಯಕ್ತಿಗಳಿಗೆ ಅನ್ಯಾಯವಾದಾಗ ಹೋರಾಟದ ಮೂಲಕ ಪ್ರತಿಭಟಿಸಿ ಅವರಿಗೆ ನ್ಯಾಯ ದೊರಕಿಸಿಕೊಡಬೇಕು ಎಂದರು.
ಕಾರ್ಯಕ್ರಮದಲ್ಲಿ ಶಾಸಕ ಡಾ.ಕೆ. ಶ್ರೀನಿವಾಸಮೂರ್ತಿ, ಜಿಲ್ಲಾ ಉಪಾಧ್ಯಕ್ಷ ಸಚ್ಚಿದಾನಂದಮೂರ್ತಿ, ರಾಜ್ಯ ಸಂಘಟನಾ ಕಾರ್ಯದರ್ಶಿ ಮೋಹನ್‌ಕುಮಾರ್, ರಾಜ್ಯ ಕಾರ್ಮಿಕ ಘಟಕದ ಅಧ್ಯಕ್ಷ ನೆ.ಲ.ರಾಮಪ್ರಸಾದ್ ಗೌಡ, ರಾಜ್ಯ ಉಪಾಧ್ಯಕ್ಷ ವಿನಯ್ ಅಂಚೆಮನೆ, ತಾಲ್ಲೂಕು ಅಧ್ಯಕ್ಷ ವಸಂತ್‌ಕುಮಾರ್, ರಾಕೇಶ್, ವೆಂಟಕೇಶ್‌ಬಾಬು, ಜಗಜ್ಯೋತಿ ಬಸವೇಶ್ವರ, ಸುರೇಶ್, ಜಗದೀಶ್ ಚೌಧರಿ, ಮಹೇಶ್, ಹೋಬಳಿ ಅಧ್ಯಕ್ಷ ಭರತ್ ಸೇರಿದಂತೆ ಪದಾದಿಕಾರಿಗಳು ಉಪಸ್ಥಿತರಿದ್ದರು.
ಸುಮಿತ್ರ, ಪಬ್ಲಿಕ್ ನೆಕ್ಟ್ , ನೆಲಮಂಗಲ
PublicNext
20/07/2022 09:42 pm