ಬೆಂಗಳೂರು: ಸಾಂವಿಧಾನಿಕ ಸಂಸ್ಥೆಗಳನ್ನು ದುರುಪಯೋಗ ಮಾಡಿಕೊಂಡು ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ವಿರುದ್ಧ ದ್ವೇಷದ ರಾಜಕಾರಣವನ್ನು ಕೇಂದ್ರ ಬಿಜೆಪಿ ಸರ್ಕಾರ ಮಾಡುತ್ತಿದೆ ಎಂದು ಆರೋಪಿಸಿ ಫ್ರೀಡಂ ಪಾರ್ಕ್ ಬಳಿ ಕಾಂಗ್ರೆಸ್ ಬೃಹತ್ ಪ್ರತಿಭಟನೆ ನಡೆಸುತ್ತಿದೆ.
ಪ್ರತಿಭಟನೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ವಿಧಾನ ಪರಿಷತ್ತಿನ ವಿರೋಧ ಪಕ್ಷದ ನಾಯಕ ಬಿ.ಕೆ. ಹರಿಪ್ರಸಾದ್, ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷರು, ಕೆಪಿಸಿಸಿ ಕಾರ್ಯಾಧ್ಯಕ್ಷರುಗಳು, ಎಐಸಿಸಿ ಪಧಾದಿಕಾರಿಗಳು, ಕಾಂಗ್ರೆಸ್ ಸಂಸದರು, ಶಾಸಕರು, ಮಾಜಿ ಸಚಿವರು ಹಾಗೂ ಹಿರಿಯ ಮುಖಂಡರು ಪಾಲ್ಗೊಂಡಿದ್ದಾರೆ.
PublicNext
21/07/2022 03:41 pm