ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಂಗಳೂರು: ಸೋನಿಯಾಗಾಂಧಿ ವಿಚಾರಣೆಗೆ ಖಂಡನೆ: ಟಾರ್ಗೆಟ್ ಮಾಡ್ತಿದ್ದಾರೆಂದು ಬಿಜೆಪಿ ವಿರುದ್ಧ ಜಮೀರ್ ಆಪಾದನೆ

ಬೆಂಗಳೂರು: ಸೋನಿಯಾ ಗಾಂಧಿ ಇಡಿ ವಿಚಾರಣೆ ಖಂಡಿಸಿ ಬೆಂಗಳೂರಿನಲ್ಲಿ ಕಾಂಗ್ರೆಸ್ ಬೃಹತ್ ಪ್ರತಿಭಟನೆ ಮಾಡಲು ಸಿದ್ಧರಾಗಿದ್ದಾರೆ. ಮುಚ್ಚಿಹೋಗಿದ್ದ ಪ್ರಕರಣವನ್ನು ಮತ್ತೆ ತೆಗೆದು ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಅವರನ್ನು ಟಾರ್ಗೆಟ್ ಮಾಡುತ್ತಿದ್ದಾರೆ, ತೊಂದರೆ ಕೊಡುತ್ತಿದ್ದಾರೆ ಎಂದು ಶಾಸಕ ಜಮೀರ್ ಅಹ್ಮದ್ ಖಾನ್ ಕಿಡಿಕಾರಿದ್ದಾರೆ.

ಒಮ್ಮೆ ಮುಚ್ಚಲ್ಪಟ್ಟ ಪ್ರಕರಣವನ್ನು ಪುನಃ ಕೆದಕಿ ನಮ್ಮ ಪಕ್ಷದ ನಾಯಕರಾದ ಶ್ರೀಮತಿ ಸೋನಿಯಾ ಗಾಂಧಿ ಅವರನ್ನು ಇಂದು ಮತ್ತೆ ಇ.ಡಿ ವಿಚಾರಣೆಗೆ ಒಳಪಡಿಸಿರುವುದು ಖಂಡನೀಯ. ಬಿಜೆಪಿ ಸರ್ಕಾರದ ರಾಜಕೀಯ ಪ್ರೇರಿತ ದಾಳಿ ಮತ್ತು ನಮ್ಮ ನಾಯಕರಿಗೆ ನೀಡುತ್ತಿರುವ ಮಾನಸಿಕ ಕಿರುಕುಳ ನಿಲ್ಲುವವರೆಗೂ ನಮ್ಮ ಹೋರಾಟ ಮುಂದುವರಿಯುತ್ತದೆ ಎಂದು ಚಾಮರಾಜಪೇಟೆ ಶಾಸಕರು ಮತ್ತು ಮಾಜಿ ಸಚಿವರಾದ ಶ್ರೀ ಬಿ‌ ಜೆಡ್ ಜಮೀರ್ ಅಹ್ಮದ್ ಖಾನ್ ಅವರು ಹೇಳಿದರು.

Edited By :
PublicNext

PublicNext

21/07/2022 04:15 pm

Cinque Terre

30.29 K

Cinque Terre

1

ಸಂಬಂಧಿತ ಸುದ್ದಿ