ವರದಿ: ಬಲರಾಮ್ ವಿ.
ಬೆಂಗಳೂರು: ಭಾರತದ 15ನೇ ರಾಷ್ಟ್ರಪತಿಯಾಗಿ ಬುಡಕಟ್ಟು ಸಮುದಾಯದ ದ್ರೌಪದಿ ಮುರ್ಮು ಅವರು ಆಯ್ಕೆಯಾದ ಹಿನ್ನೆಲೆಯಲ್ಲಿ ಕೆಆರ್ ಪುರದಲ್ಲಿ ನೂರಾರು ಬಿಜೆಪಿ ಕಾರ್ಯಕರ್ತರು ಸಿಹಿ ಹಂಚಿ ಸಂಭ್ರಮಿಸಿದರು.
ಬಿಜೆಪಿ ಬೆಂಬಲಿತ ರಾಷ್ಟ್ರಪತಿ ಅಭ್ಯರ್ಥಿಯಾಗಿ ದ್ರೌಪದಿ ಮುರ್ಮು ಕಣಕ್ಕಿಳಿದಿದ್ದರು. ಪ್ರಧಾನಿ ನರೇಂದ್ರ ಮೋದಿ ಹಾಗೂ ಬಿಜೆಪಿ ಅಧ್ಯಕ್ಷರಾದ ಜೆ.ಪಿ.ನಡ್ಡಾ ಅವರಿಗೆ ಬೆಂಗಳೂರು ನಗರ ಎಸ್ ಟಿ ಮೋರ್ಚಾದ ಅಧ್ಯಕ್ಷರಾದ ಬಾಕ್ಸರ್ ನಾಗರಾಜ್ ಈ ಸಂದರ್ಭ ಅಭಿನಂದಿಸಿದ್ದಾರೆ.
PublicNext
21/07/2022 10:48 pm