ಬೆಂಗಳೂರು: ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಗಳಾಗಿದ್ದಾಗ ಅಲ್ಪಸಂಖ್ಯಾತರ ಅನುದಾನವನ್ನು 280 ಕೋಟಿ ರೂ.ಗಳಿಂದ 3,150 ಕೋಟಿ ರೂ.ಗೆ ಏರಿಸಿದರು. ಅಷ್ಟೇ ಅಲ್ಲದೆ ಅಲ್ಪಸಂಖ್ಯಾತರಿಗಾಗಿ ಸಾಕಷ್ಟು ಯೋಜನೆಗಳನ್ನು ನೀಡಿದರು. ಅವರ ಋಣ ತೀರಿಸುವುದಕ್ಕಾಗಿ, ಹೆಚ್ಚಿನ ಸಂಖ್ಯೆಯಲ್ಲಿ ಅಲ್ಪಸಂಖ್ಯಾತರು ಅವರ ಜನ್ಮದಿನದ ಅಮೃತ ಮಹೋತ್ಸವದಲ್ಲಿ ಪಾಲ್ಗೊಂಡು, ಕಾರ್ಯಕ್ರಮ ಯಶಸ್ವಿಗೊಳಿಸಬೇಕು ಎಂದು ಮನವಿ ಮಾಡಲು ನಾನು ಬೆಳಗಾವಿ, ಹುಬ್ಬಳ್ಳಿ - ಧಾರವಾಡ, ಹಾವೇರಿ, ದಾವಣಗೆರೆ ಮತ್ತು ಚಿತ್ರದುರ್ಗ ಜಿಲ್ಲೆಗಳಲ್ಲಿ ಪೂರ್ವ ಭಾವಿ ಚಿಂತನ ಸಭೆ ನಡೆಸುತ್ತಿದ್ದೇನೆ ಎಂದು ಶಾಸಕ ಜಮೀರ್ ಅಹ್ಮದ್ ಖಾನ್ ಹೇಳಿದ್ದಾರೆ.
ಸಿದ್ದರಾಮಯ್ಯ ಅವರ 75ನೇ ಜನ್ಮದಿನದ ಅಮೃತ ಮಹೋತ್ಸವದ ಪ್ರಯುಕ್ತ ಪೂರ್ವ ಭಾವಿ ಸಭೆಯಲ್ಲಿ ಪಾಲ್ಗೊಳ್ಳಲು ಇಂದು ಹಾವೇರಿಗೆ ತೆರಳುವ ಮುನ್ನ ಮಾಧ್ಯಮಗಳಿಗೆ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, 'ಕಾರ್ಯಕ್ರಮದಲ್ಲಿ ಸಿದ್ದರಾಮಯ್ಯ ಅವರ ಅಭಿಮಾನಿಗಳು ಮತ್ತು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್, ಆರ್.ವಿ ದೇಶಪಾಂಡೆ, ಮಲ್ಲಿಕಾರ್ಜುನ ಖರ್ಗೆ, ಜಿ.ಪರಮೇಶ್ವರ್ ಸೇರಿದಂತೆ ಎಲ್ಲ ನಾಯಕರು, ಅಪಾರ ಸಂಖ್ಯೆಯ ಕಾರ್ಯಕರ್ತರು ಭಾಗವಹಿಸಲಿದ್ದಾರೆ ಎಂದು ಜಮೀರ್ ಅಹಮದ್ ಖಾನ್ ಹೇಳಿದರು.
PublicNext
25/07/2022 05:16 pm