ಬೆಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಯುವಮೋರ್ಚಾ ಕಾರ್ಯಕಾರಿಣಿ ಸದಸ್ಯ ಪ್ರವೀಣ್ ನೆಟ್ಟಾರು ಹತ್ಯೆ ಖಂಡಿಸಿ ಬಿಜೆಪಿ ಕಾರ್ಯಕರ್ತರು ಕೆಂಗೇರಿ ಶಿರ್ಕೆ ಸರ್ಕಲ್ ನಲ್ಲಿ ಪ್ರೊಟೆಸ್ಟ್ ಮಾಡಿದ್ದಾರೆ. ನಂತರ ಮೇಣದ ಬತ್ತಿ ಹಚ್ಚಿ ಸಂತಾಪ ಸೂಚಿಸಿದರು.
ಪ್ರತಿಭಟನೆಯಲ್ಲಿ ಯಶವಂತಪುರ ವಿಧಾನಸಭಾ ಕ್ಷೇತ್ರದ ಹಲವು ಕಾರ್ಯಕರ್ತರು ಪಾಲ್ಗೊಂಡಿದ್ರು. ನಾವು ಕಷ್ಟಪಟ್ಟು ಗೆಲ್ಲಿಸುತ್ತೇವೆ, ಅವ್ರು ನಮಗೆ ಯಾವ ಸೇಫ್ಟಿ ಕೊಡುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ ಪದಾಧಿಕಾರಿಗಳು, ಕಾರ್ಯಕರ್ತರು ರಾಜೀನಾಮೆ ಕೊಡಲು ಸಿದ್ಧವಾಗಿದ್ದಾರೆ.
ಪ್ರವೀಣ್ ಅವರ ಕುಟುಂಬಕ್ಕೆ ಆದ ಅನ್ಯಾಯ ಯಾರಿಗೂ ಆಗಬಾರದು. ಹತ್ಯೆ ಮಾಡಿದವರಿಗೆ ಗಲ್ಲು ಶಿಕ್ಷೆಯಾಗಬೇಕು ಎಂದು ಕಾರ್ಯಕರ್ತರು ಆಗ್ರಹಿಸಿ, ಆಕ್ರೋಶ ವ್ಯಕ್ತಪಡಿಸಿದರು.
ವರದಿ: ರಂಜಿತಾ ಸುನಿಲ್, ಪಬ್ಲಿಕ್ ನೆಕ್ಸ್ಟ್ ಬೆಂಗಳೂರು
PublicNext
28/07/2022 09:43 pm