ವರದಿ- ಬಲರಾಮ್ ವಿ
ಬೆಂಗಳೂರು: ಕೆಆರ್ ಪುರ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ತಮ್ಮನ್ನು ಸ್ವಾರ್ಥಕ್ಕಾಗಿ ಬಳಸಿಕೊಂಡಿದ್ದಾರೆಂದು ಕೆಆರ್ ಪುರ ಮಾಜಿ ಶಾಸಕ, ಬಿಎಂಟಿಸಿ ಅಧ್ಯಕ್ಷ ನಂದೀಶ್ ರೆಡ್ಡಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಕೆಆರ್ ಪುರದ ರಾಮಮೂರ್ತಿ ನಗರದಲ್ಲಿ ಹಿರಿಯ ನಾಗರೀಕರ ಹಿತ ರಕ್ಷಣೆ ಸಂಘದಿಂದ ಆಯೋಜಿಸಲಾಗಿದ್ದ ಪ್ರಥಮ ವಾರ್ಷಿಕೋತ್ಸವ ಸಮಾರಂಭದಲ್ಲಿ ಮಾಜಿ ಕೇಂದ್ರ ಸಚಿವ, ಸಂಸದರಾದ ಡಿ.ವಿ.ಸದಾನಂದಗೌಡ, ನಗರಾಭಿವೃದ್ಧಿ ಸಚಿವ ಬಿ.ಎ.ಬಸವರಾಜ, ಬಿ.ಎಂ.ಟಿ.ಸಿ ಅಧ್ಯಕ್ಷ ಎನ್.ಎಸ್.ನಂದೀಶ ರೆಡ್ಡಿ ಭಾಗಿಯಾಗಿದ್ದರು.
ಉಪ ಚುನಾವಣೆಯಲ್ಲಿ ಗೆದ್ದ ದಿನದಂದು ಕರೆ ಮಾಡಿದವರು, ಇದುವರೆಗೂ ಯಾವುದೇ ಕರೆ ಹಾಗೂ ಸೌಜನ್ಯಕ್ಕೂ ಭೇಟಿಯಾಗಿಲ್ಲ ಎಂದರು. ತಾವು ಶಾಸಕರಿರುವ ಸಂದರ್ಭದಲ್ಲಿ ಕ್ಷೇತ್ರಕ್ಕೆ ಕಾವೇರಿ ನೀರು ಪೈಪ್ ಲೈನ್ ಯೋಜನೆಯನ್ನು ತಂದಿದ್ದು, ಆದ್ರೆ ಮುಖ್ಯಮಂತ್ರಿ ಉದ್ಘಾಟನೆ ಕಾರ್ಯಕ್ರಮಕ್ಕೆ ಯಾವುದೇ ಆಹ್ವಾನ ನೀಡಲಿಲ್ಲ.
ಕ್ಷೇತ್ರದಲ್ಲಿ ಹಲವು ಯೋಜನೆಗಳ ಲೋಕಾರ್ಪಣೆಗೆ ಸೌಜನ್ಯಕ್ಕೂ ಆಹ್ವಾನ ನೀಡುತ್ತಿಲ್ಲ ಎಂದು ಸಚಿವರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ತಮ್ಮ ಬೆಂಬಲಿಗರಿಗೂ ಪಕ್ಷದಲ್ಲಿ ನಿರ್ಲಕ್ಷ್ಯ ತೋರಿಸುವುದನ್ನು ಖಂಡಿಸಿದರು. ಬಿಎಂಟಿಸಿ ಸಂಸ್ಥೆಗೆ ಪ್ರತಿ ದಿನ 2 ಕೋಟಿ ನಷ್ಟವಾಗುತ್ತಿದ್ದು, ನೌಕರರು ಸಂಕಷ್ಟದಲ್ಲಿ ಇದ್ದಾರೆ. ಸರ್ಕಾರದ ಸಹಕಾರದಿಂದ ವೇತನ ನೀಡಲಾಗುತ್ತಿದೆ ಎಂದು ತಿಳಿಸಿದರು.
PublicNext
01/08/2022 08:54 am