ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಂಗಳೂರು: ಮಳೆ ಹಾನಿ ,ಮಂಕಿಪಾಕ್ಸ್ ಕುರಿತು ನಾಳೆ ಸಿಎಂ ಸಭೆ!

ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಕಡೆ ವ್ಯಾಪಕ ಮಳೆಯಾಗುತ್ತಿದೆ. ಈ ಬಗ್ಗೆ ಅಗತ್ಯ ಕ್ರಮಗಳ ಕುರಿತು ನಾಳೆ ಸಿಎಂ ಬೊಮ್ಮಾಯಿ ಸಭೆ ನಡೆಸುತ್ತಿದ್ದಾರೆ.

ಈ ಬಗ್ಗೆ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಮಳೆ ಅನಾಹುತ ಹಾಗೂ ಮಂಕಿಪಾಕ್ಸ್ ಆತಂಕದ ಕುರಿತು ನಾಳೆ ಅಧಿಕಾರಿಗಳ ಜತೆ ಸಭೆ ನಡೆಸಿ ಅಗತ್ಯ ಕ್ರಮ ಕೈಗೊಳ್ಳಲಾಗುತ್ತದೆ ಎಂದ್ರು.

ಇನ್ನೂ ಬೆಂಗಳೂರು ಸೇರಿದಂತೆ ಕರಾವಳಿ, ಮಲೆನಾಡು, ಉತ್ತರ ಕರ್ನಾಟಕ ಭಾಗದ ಹಲವು ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗುತ್ತಿದೆ. ಮಳೆ ನಷ್ಟದ ಬಗ್ಗೆ ಚರ್ಚಿಸಿ ಪರಿಹಾರದ ಬಗ್ಗೆ ಸೂಚನೆ ನೀಡುತ್ತೇನೆ ಎಂದರು.

Edited By : PublicNext Desk
PublicNext

PublicNext

01/08/2022 06:40 pm

Cinque Terre

8.25 K

Cinque Terre

0

ಸಂಬಂಧಿತ ಸುದ್ದಿ