ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬಿಬಿಎಂಪಿ ಚುನಾವಣೆಗೆ ಬಿಜೆಪಿ ತಾಲೀಮು

ಬೆಂಗಳೂರು: ವರ್ಷಾಂತ್ಯದಲ್ಲಿ ನಡೆಯುವ ಬಿಬಿಎಂಪಿ ಚುನಾವಣೆ ತಯಾರಿಯನ್ನು ಆಡಳಿತರೂಢ ಬಿಜೆಪಿ ನಡೆಸಲು ಆರಂಭಿಸಿದೆ. ಈ ಸಂಬಂಧ ನಿನ್ನೆ ಬಿಜೆಪಿ ಕೇಂದ್ರ ಕಚೇರಿಯಲ್ಲಿ ಬಿಜೆಪಿ‌ ಅಧ್ಯಕ್ಷ ನಳೀನ್ ಕುಮಾರ್ ಕಟೀಲು ನೇತೃತ್ವದಲ್ಲಿ ಸಭೆ ನಡೆಯಿತು.

ಪಾಲಿಕೆ ಚುನಾವಣೆಗೆ ವಾರ್ಡ್‌ವಾರು ಮೀಸಲಾತಿ ಪ್ರಕಟಿಸುವಂತೆ ಸುಪ್ರೀಂ ಕೋರ್ಟ್‌ ನಿರ್ದೇಶನ ನೀಡಿರುವುದರಿಂದ ಬಿಜೆಪಿ ಚುನಾವಣಾ ಸಿದ್ಧತೆಯನ್ನು ಚುರುಕುಗೊಳಿಸಿದೆ. ಪಕ್ಷದ ರಾಜ್ಯ ಘಟಕದ ಕಚೇರಿಯಲ್ಲಿ ಬೆಂಗಳೂರು ನಗರವನ್ನು ಪ್ರತಿನಿಧಿಸುವ ಸಚಿವರು, ಶಾಸಕರು, ಸಂಸದರು ಮತ್ತು ವಿಧಾನ ಪರಿಷತ್‌ ಸದಸ್ಯರ ಜತೆ ಸೋಮವಾರ ಸಭೆ ನಡೆಸಿದ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್‌ ಕುಮಾರ್‌ ಕಟೀಲ್‌, ಚುನಾವಣಾ ಸಿದ್ಧತೆ ಕುರಿತು ಚರ್ಚಿಸಿದರು.

ಸಚಿವರಾದ ಆರ್‌. ಅಶೋಕ, ವಿ. ಸೋಮಣ್ಣ, ಅಶ್ವತ್ಥನಾರಾಯಣ, ಸಂಸದರಾದ ಡಿ.ವಿ. ಸದಾನಂದ ಗೌಡ, ಪಿ.ಸಿ. ಮೋಹನ್‌ ಮತ್ತು ತೇಜಸ್ವಿ ಸೂರ್ಯ ಸಭೆಯಲ್ಲಿ ಭಾಗವಹಿಸಿದ್ದರು. ಬೆಂಗಳೂರು ಮಹಾನಗರ ವ್ಯಾಪ್ತಿಯ ಮೂರು ಘಟಕಗಳ ಪದಾಧಿಕಾರಿಗಳೂ ಸಭೆಯಲ್ಲಿದ್ದರು. ಎರಡು ಗಂಟೆಗಳಿಗೂ ಹೆಚ್ಚು ಕಾಲ ಚರ್ಚೆ ನಡೆಸಲಾಗಿದೆ.

ಶಾಸಕರಿಗೆ ಆಯಾ ಕ್ಷೇತ್ರಗಳ ಸಂಪೂರ್ಣ ಉಸ್ತುವಾರಿ ಇರಲಿದೆ. ಬಿಜೆಪಿ ಶಾಸಕರಿಲ್ಲದ ಕ್ಷೇತ್ರಗಳಿಗೆ ಪಕ್ಷದ ಸಂಸದರು ಮತ್ತು ವಿಧಾನ ಪರಿಷತ್‌ ಸದಸ್ಯರನ್ನು ಉಸ್ತುವಾರಿಗಳನ್ನಾಗಿ ನೇಮಿಸಲಾಗುವುದು. ಹೊಣೆಗಾರಿಕೆ ವಹಿಸಿದ ಕ್ಷೇತ್ರಗಳಲ್ಲಿ ಹೆಚ್ಚಿನ ಸ್ಥಾನ ಗೆಲ್ಲಿಸಿಕೊಂಡು ಬರುವ ಹೊಣೆಯನ್ನು ನೀಡಲಾಗಿದೆ.

Edited By : Nagaraj Tulugeri
Kshetra Samachara

Kshetra Samachara

02/08/2022 11:01 am

Cinque Terre

944

Cinque Terre

0

ಸಂಬಂಧಿತ ಸುದ್ದಿ