ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಂಗಳೂರು: ದಾವಣಗೆರೆಯಲ್ಲಿ ನಡೆಯುವ ಸಿದ್ದರಾಮೋತ್ಸವ ಕಾರ್ಯಕ್ರಮಕ್ಕೆ ಉಚಿತ ಬಸ್ ವ್ಯವಸ್ಥೆ!

ವರದಿ- ಬಲರಾಮ್ ವಿ

ಬೆಂಗಳೂರು: ದಾವಣಗೆರೆಯಲ್ಲಿ ನಡೆಯುವ ಸಿದ್ದರಾಮಯ್ಯನವರ 75 ನೇ ಜನ್ಮ ದಿನದ ಪ್ರಯುಕ್ತ ಆಯೋಜಿಸಲಾದ ಸಿದ್ದರಾಮೋತ್ಸವ ಕಾರ್ಯಕ್ರಮಕ್ಕೆ ಮಹದೇವಪುರ ಕ್ಷೇತ್ರದ ಬಿದರಹಳ್ಳಿ ಬ್ಲಾಕ್ ಕಾಂಗ್ರೆಸ್ ವತಿಯಿಂದ ಉಚಿತ ಬಸ್ ನ ವ್ಯವಸ್ಥೆ ಮಾಡಲಾಗಿದೆ.

ಮಹದೇವಪುರ ಕ್ಷೇತ್ರದ ಬಿದರಹಳ್ಳಿಯ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಿ.ಡಿ.ನಾಗಪ್ಪ ಹಾಗೂ ಮಾಜಿ ಅಧ್ಯಕ್ಷ ಮುನಿರಾಜು ನೇತೃತ್ವದಲ್ಲಿ ಎರಡು ನೂರಕ್ಕೂ ಅಧಿಕ ಜನರು ಬಸ್ ನಲ್ಲಿ ಪ್ರಯಾಣ ಬೆಳೆಸಿದರು.

ಬಳಿಕ ಮಾತನಾಡಿದ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಿ.ಡಿ ನಾಗಪ್ಪ ಅವರು, ಸಿದ್ದರಾಮಯ್ಯನವರು ಮುಖ್ಯಮಂತ್ರಿಗಳಾಗಿದ್ದಾಗ, ನೂರ ಐವತ್ತಕ್ಕೂ ಅಧಿಕ ಯೋಜನೆಗಳ ಜಾರಿಗೆ ತರೋ ಮೂಲಕ ಜನಪ್ರಿಯತೆ ಗಳಿಸಿದ್ದಾರೆ ಎಂದರು.

ಸಿದ್ಧರಾಮಯ್ಯನವರಿಗೆ ದೇವರು ಹೆಚ್ಚಿನ ಆಯುಷ್ಯ ಆರೋಗ್ಯ ನೀಡಲಿ ಎಂದು ಹಾರೈಸಿದರು.

Edited By : Manjunath H D
Kshetra Samachara

Kshetra Samachara

02/08/2022 09:36 pm

Cinque Terre

1.11 K

Cinque Terre

0

ಸಂಬಂಧಿತ ಸುದ್ದಿ