ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಚುನಾವಣೆಯ ಮೀಸಲು ಪಟ್ಟಿ ವಿಚಾರವಾಗಿ ಸುಪ್ರೀಂಕೋರ್ಟ್ ನೀಡಿದ್ದ ಗಡುವು ನಾಳೆಗೆ ಮುಕ್ತಾಯವಾಗಲಿದೆ.
ಇಂದು ಮೀಸಲಾತಿ ಪಟ್ಟಿಯನ್ನು ಬಿಡುಗಡೆ ಮಾಡುವ ಸಾಧ್ಯತೆ ಇದೆ. ಒಂದು ವಾರ ಗಡುವು ನೀಡಿದ ಸುಪ್ರೀಂ ಕೋರ್ಟ್ ಆದೇಶಕ್ಕೆ ರಾಜ್ಯ ಸರ್ಕಾರ ಡೋಂಟ್ ಕೇರ್ ಎನ್ನುತ್ತಿದೆ. ಮೀಸಲಾತಿ ಪಟ್ಟಿಯನ್ನ ಅಂತಿಮಗೊಳಿಸುವಲ್ಲಿ ರಾಜ್ಯ ಸರ್ಕಾರ ಮೀನಾಮೇಷ ಎಣಿಸುತ್ತಿದೆ. ಅಷ್ಟೇ ಅಲ್ಲದೇ ಬಿಬಿಎಂಪಿ ಚುನಾವಣೆ ಮುಂದೂಡಲು ರಾಜ್ಯ ಸರ್ಕಾರ ಪ್ಲಾನ್ ನಡೆಸುತ್ತಿದೆ ಎಂದು ತಿಳಿದು ಬರುತ್ತಿದೆ.
Kshetra Samachara
03/08/2022 12:00 pm