ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಂಗಳೂರು: ನಾಡೋಜ ಡಾ.ಮಹೇಶ ಜೋಶಿ ಅವರಿಗೆ ರಾಜ್ಯ ಸಚಿವ ದರ್ಜೆ ಸ್ಥಾನಮಾನ

ರಿಪೋರ್ಟ್- ರಂಜಿತಾಸುನಿಲ್..

ಬೆಂಗಳೂರು: ಕನ್ನಡ ಭಾಷೆ, ಸಾಹಿತ್ಯ, ಕಲೆ, ಸಂಸ್ಕೃತಿ ಮತ್ತು ಜಾನಪದ ಇವುಗಳ ರಕ್ಷಣೆ, ಪ್ರಸಾರ ಮತ್ತು ಅಭಿವೃದ್ಧಿಯ ಮೂಲ ಧ್ಯೇಯೋದ್ದೇಶಗಳೊಂದಿಗೆ ಕನ್ನಡ-ಕನ್ನಡಿಗ-ಕರ್ನಾಟಕದ ಹಿತರಕ್ಷಣೆ ಕಾಪಾಡುವ ಜವಾಬ್ದಾರಿಯನ್ನು ಕನ್ನಡ ಸಾಹಿತ್ಯ ಪರಿಷತ್ತು ಹೊಂದಿದೆ.

ಮೈಸೂರು ಮಹಾರಾಜರಾದ ರಾಜರ್ಷಿ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಪೋಷಣೆಯೊಂದಿಗೆ ಸ್ಥಾಪಿತವಾದ ಸಮಗ್ರ ಕನ್ನಡಿಗರ ಏಕೈಕ ಪ್ರಾತಿನಿಧಿಕ ಸಂಸ್ಥೆಯಾದ ಕನ್ನಡ ಸಾಹಿತ್ಯ ಪರಿಷತ್ತು 107 ವರ್ಷಗಳ ಸುದೀರ್ಘ ಹಾಗೂ ಶ್ರೀಮಂತ ಇತಿಹಾಸ ಹೊಂದಿದೆ.

ಇಲ್ಲಿಯವರೆಗೆ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಿಗೆ ಯಾವುದೇ ಸರ್ಕಾರ ಸಚಿವರ ಸ್ಥಾನಮಾನವನ್ನು ನೀಡಿರಲಿಲ್ಲ. ಇದೇ ಮೊಟ್ಟಮೊದಲ ಬಾರಿಗೆ ಮಾನ್ಯ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ನಾಡೋಜ ಡಾ. ಮಹೇಶ ಜೋಶಿ ಅವರ ಕಾರ್ಯವೈಖರಿಯನ್ನು ದೃಷ್ಟಿಯಲ್ಲಿಟ್ಟುಕೊಂಡು ರಾಜ್ಯ ಸಚಿವರ ದರ್ಜೆಗೆ ಸಮನಾದ ಸ್ಥಾನಮಾನವನ್ನು ನೀಡಿ ಗೌರವಿಸಿದ್ದಾರೆ.

Edited By : Nagesh Gaonkar
PublicNext

PublicNext

03/08/2022 08:25 pm

Cinque Terre

33.16 K

Cinque Terre

0

ಸಂಬಂಧಿತ ಸುದ್ದಿ