ಬೆಂಗಳೂರು: ಕೇಂದ್ರ ಗೃಹ ಹಾಗೂ ಸಹಕಾರ ಸಚಿವ ಅಮಿತ್ ಶಾ ಯಲಹಂಕದ ಮದರ್ ಡೈರಿಗೆ ಭೇಟಿ ನೀಡಿದರು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಜತೆಗಿದ್ದರು.
ಕೆ.ಎಂ.ಎಫ್. ಮದರ್ ಡೈರಿ ಕೇಂದ್ರಕ್ಕೆ ಭೇಟಿ ನೀಡಿ ಒಕ್ಕೂಟದ ಕಾರ್ಯವೈಖರಿ ಹಾಗೂ ಸಹಕಾರ ಸಂಸ್ಥೆಗಳ ಬ್ಯಾಂಕಿಂಗ್ ವ್ಯವಸ್ಥೆಗಳ ಕಾರ್ಯಶೈಲಿ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡರು.
ಈ ಸಂದರ್ಭ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಸಹಕಾರ ಸಚಿವ ಎಸ್.ಟಿ.ಸೋಮಶೇಖರ್, ಯಲಹಂಕ ಶಾಸಕ ಎಸ್.ಆರ್.ವಿಶ್ವನಾಥ್ ಮತ್ತಿತರರು ಉಪಸ್ಥಿತರಿದ್ದರು.
-ಸುರೇಶ್ ಬಾಬು, ಪಬ್ಲಿಕ್ ನೆಕ್ಸ್ಟ್ ಯಲಹಂಕ
PublicNext
04/08/2022 10:43 pm