ಬೆಂಗಳೂರು: ಬಿಬಿಎಂಪಿ ಚುನಾವಣೆಗೆ ಸಂಬಂಧಿಸಿದಂತೆ ಮಾಡಿರುವ ವಾರ್ಡ್ ಮರುವಿಂಗಡಣೆ ಹಾಗೂ ಮೀಸಲಾತಿ ಮಾಡಿರುವುದನ್ನು ಕಾಂಗ್ರೆಸ್ ಖಂಡಿಸುತ್ತದೆ. ಸಂವಿಧಾನದ ವಿರುದ್ಧ ಕಾನೂನು ಚೌಕಟ್ಟು ತಿರುಚುವ ಕೆಲಸವನ್ನು ಬಿಜೆಪಿ ಸರ್ಕಾರ ಮಾಡಿದೆ.
ಕೇಶವಕೃಪದಲ್ಲಿ ತೀರ್ಮಾನವಾಗಿ ವಿಕಾಸ ಸೌಧದ ನಗರಾಭಿವೃದ್ಧಿ ಇಲಾಖೆ ಕಚೇರಿಯಲ್ಲಿ ಆದೇಶ ನೀಡಲಾಗಿದೆ. ಹೀಗಾಗಿ ವಿಕಾಸ ಸೌಧದ ನಗರಾಭಿವೃದ್ಧಿ ಇಲಾಖೆ ಕಚೇರಿಯನ್ನು ಬಿಜೆಪಿ ಕಚೇರಿಯನ್ನಾಗಿ ಮಾಡಿಕೊಂಡಿದ್ದು, ಅದಕ್ಕೆ ಎಲ್ಲರೂ ಒಪ್ಪಿದರೆ ಆ ಕಚೇರಿಗೆ ಬಿಜೆಪಿ ಕಚೇರಿ ಎಂದು ನಾಮಫಲಕ ಹಾಕಲಾಗುವುದು ಎಂದು ಸಂಸದ ಡಿಕೆ ಸುರೇಶ್ ಹೇಳಿದರು. ಕೆಪಿಸಿಸಿ ಕಚೇರಿಯಲ್ಲಿ ಇಂದು ಕರೆದ ಪತ್ರಿಕಾಗೋಷ್ಠಿಯಲ್ಲಿ ಡಿ.ಕೆ.ಸುರೇಶ ಆಡಿದ ಮಾತಿನ ಹೈಲೈಟ್ಸ್ ಇಲ್ಲಿದೆ.
ವರದಿ: ಪ್ರವೀಣ್ ರಾವ್
PublicNext
05/08/2022 08:10 pm