ಪ್ರವೀಣ್ ರಾವ್...
ಬೆಂಗಳೂರು : ಬೆಂಗಳೂರು ನಗರಕ್ಕೆ ಬದಲಾವಣೆ ತರದೆ ಕಾಯ್ದೆ ತಂದರು. ಕಾಯ್ದೆ ಬಂದು ಒಂದು ವರ್ಷ ಆಗಿದ್ದರೂ ಮೀಸಲಾತಿ, ವಾರ್ಡ್ ಮರುವಿಂಗಡಣೆ ವಿಚಾರದಲ್ಲಿ ಗೊಂದಲ ಮೂಡಿಸಿದ್ದಾರೆ. ಬಿಜೆಪಿ ಶಾಸಕರ ಕ್ಷೇತ್ರದಲ್ಲಿ ಅವರ ಅಭ್ಯರ್ಥಿಗಳಿಗೆ ಅನುಕೂಲ ಮಾಡಲು ಈ ರೀತಿ ಮಾಡಿದ್ದಾರೆ.
ಕಾಂಗ್ರೆಸ್ ಕ್ಷೇತ್ರದಲ್ಲಿ ಪ್ರಬಲ ಅಭ್ಯರ್ಥಿಗಳು ಗೆಲ್ಲಬಾರದು ಎಂಬ ಕಾರಣಕ್ಕೆ ಮಾಡಿದ್ದಾರೆ. ಎಲ್ಲ ವರ್ಗದ ಜನರಿಗೆ ಪ್ರಾತಿನಿಧ್ಯ ಸಿಗಬೇಕು ಎಂದು ವಾರ್ಡ್ ಮರುವಿಂಗಡಣೆ ಹಾಗೂ ಮೀಸಲಾತಿ ನೀಡಲಾಗುವುದು.
ಬಿಜೆಪಿ ಕ್ಷೇತ್ರದಲ್ಲಿ ಬಿಸಿಬಿ ಇದೆ. ಎಲ್ಲಿ ಸಾಮಾನ್ಯ ವರ್ಗ ಹೆಚ್ಚಿದೆ ಅಲ್ಲಿ ಬಿಸಿಬಿ ನೀಡಿದ್ದಾರೆ. ಬಿಜೆಪಿ ಕ್ಷೇತ್ರದಲ್ಲಿ ಮಹಿಳೆಯರಿಗೆ ಅವಕಾಶವಿಲ್ಲ. ಚಿಕ್ಕಪೇಟೆಯಲ್ಲಿ ಮಹಿಳೆಯರಿಗೆ ಮೀಸಲಾತಿ ಇಲ್ಲ, ಗಾಂಧಿ ನಗರದಲ್ಲಿ ಎಲ್ಲ ವಾರ್ಡ್ ಗಳ ಮೀಸಲಾತಿ ಮಹಿಳೆಯರಿಗೆ ನೀಡಿದ್ದಾರೆ ಎಂದು ಕಾಂಗ್ರೆಸ್ ಶಾಸಕ ದಿನೇಶ್ ಗುಂಡೂರಾವ್ ಆರೋಪಿಸಿದ್ದಾರೆ.
ಕೆಪಿಸಿಸಿ ಕಚೇರಿಯಲ್ಲಿ ಇಂದು ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತಾಡುತ್ತಿದ್ದ ಅವರು ಬಿಜೆಪಿ ವಿರುದ್ಧ ಪ್ರಹಾರ ನಡೆಸಿದರು.ಅವರ ಮಾತಿನ ಹೈಲೈಟ್ಸ್ ಇಲ್ಲಿದೆ.
ಸಾಮಾಜಿಕ ನ್ಯಾಯ ಎಂದರೆ ಸಮಾನ ಅವಕಾಶ ಮತ್ತು ಅಧಿಕಾರ ನೀಡಬೇಕು. ಅನುದಾನ, ಕಾಯ್ದೆ, ವಾರ್ಡ್ ಮರುವಿಂಗಡಣೆ,ಮೀಸಲಾತಿ ಎಲ್ಲದರಲ್ಲೂ ರಾಜಕೀಯ. ಹೀಗಿರುವಾಗ ಬೆಂಗಳೂರು ಅಭಿವೃದ್ಧಿ ಹೇಗೆ ಸಾಧ್ಯ. ಸ್ಥಳೀಯ ಸಂಸ್ಥೆಗಳ ದುರ್ಬಲ ಮಾಡಲಾಗುತ್ತಿದೆ.
ಒಬಿಸಿ ಮೀಸಲಾತಿ ನಾವು ಬೆಂಬಲಿಸುತ್ತೇವೆ. ಬಿಜೆಪಿ ಆಡಳಿತ ಕೇವಲ ಸ್ವಾರ್ಥಕ್ಕೆ ಮಾಡುತ್ತಿದೆಯೇ ಹೊರತು ಜನರಿಗಾಗಿ ಅಲ್ಲ. ಇದರಲ್ಲಿ ವೈಜ್ಞಾನಿಕ, ನ್ಯಾಯಬದ್ಧ ಪ್ರಕ್ರಿಯೆ ಇಲ್ಲ. ಇದಕ್ಕೆ ಸಂಪೂರ್ಣ ವಿರೋಧವಿದೆ. ಇದನ್ನು ಸರಿಪಡಿಸಬೇಕು ಎಂದು ಆಗ್ರಹಿಸುತ್ತೇವೆ.
ಬಿಜೆಪಿಯವರು ಅವರಲ್ಲಿರುವ ಪ್ರಬಲನಾಯಕರನ್ನೇ ಮುಗಿಸಲು ಮುಂದಾಗಿದ್ದಾರೆ. ಅವರಲ್ಲಿ ಆಂತರಿಕ ಗದ್ದಲ ಪ್ರಾರಂಭವಾಗಿದೆ. ಕಾಂಗ್ರೆಸ್ ಸರ್ಕಾರ ಇದ್ದಾಗ ನಮಗೆ ಈ ರೀತಿ ಅನ್ಯಾಯ ಆಗಿರಲಿಲ್ಲ. ಈಗ ನಮ್ಮ ಸರ್ಕಾರದಲ್ಲಿ ನಮಗೆ ಅನ್ಯಾಯವಾಗಿದೆ ಎಂದು ಬಿಜೆಪಿಯವರು ಹೇಳುತ್ತಿದ್ದಾರೆ. ಹಾಗಿದ್ದರೆ ಇವರು ಯಾರ ಪರ ಇದ್ದಾರೆ. ಆರ್ ಎಸ್ ಎಸ್ ನಿಯಂತ್ರಣದಲ್ಲಿ ಬೆಂಗಳೂರು ನಗರವನ್ನು ಇಡಲು ಈ ರೀತಿ ಮಾಡುತ್ತಿದ್ದಾರೆ.
Kshetra Samachara
05/08/2022 08:18 pm