ವರದಿ: ಗೀತಾಂಜಲಿ
ಬೆಂಗಳೂರು: ದಾವಣಗೆರೆಯಲ್ಲಿ ಸಿದ್ದರಾಮಯ್ಯನವರು ಅಮೃತ ಮಹೋತ್ಸವ ಮಾಡಿದ್ರು. ನಾವೇ ಅಧಿಕಾರಕ್ಕೆ ಬರುತ್ತೇವೆ ಅಂತ ಕಾಂಗ್ರೆಸ್ ಮುಖಂಡರು ಭ್ರಮೆಯಲ್ಲಿದ್ದಾರೆ. ಸಿದ್ದರಾಮಯ್ಯನವರ ಮೇಲೆ ನಿಜವಾಗಿಯೂ ಗೌರವ ಇದೆ. ಸಿದ್ದರಾಮಯ್ಯನವರ ಬಗ್ಗೆ ಇಟ್ಟಿರುವ ಗೌರವಕ್ಕೆ ಅಭಿಮಾನಿಗಳು ಬಂದಿದ್ದಾರೆಯೇ ವಿನಃ ಅವು ಕಾಂಗ್ರೆಸ್ ಮತಗಳಲ್ಲ ಎಂದು ಎಂ.ಪಿ. ರೇಣುಕಾಚಾರ್ಯ ವಾಖ್ಯಾನಿಸಿದರು.
ವಿಧಾನಸೌಧದಲ್ಲಿ ಮಾತನಾಡಿದ ರೇಣುಕಾಚಾರ್ಯ, ಎಲ್ಲೋ ಒಂದು ಕಡೆ ಕಾಂಗ್ರೆಸ್ ಸತ್ತು ಹೋಗಿದೆ. ಬಿಜೆಪಿ ದೇಶ- ರಾಜ್ಯದಲ್ಲಿ ಬಲಿಷ್ಠವಾಗಿದೆ. ಮೋದಿ, ಬಿಎಸ್ ವೈ ಅನೇಕ ಅಭಿವೃದ್ಧಿ ಯೋಜನೆ ನೀಡಿದ್ದಾರೆ. ಇನ್ನು, ನೇಕಾರರ ಮಕ್ಕಳಿಗೆ ವಿದ್ಯಾನಿಧಿ ಸಿಎಂ ಕೊಟ್ಟಿದ್ದಾರೆ. ನಮ್ಮ ಸರ್ಕಾರ ಅನೇಕ ಜನಪರ ಕಾರ್ಯಕ್ರಮ ನೀಡಿದೆ. ಒಟ್ಟಾಗಿ ನಾವು ಮುನ್ನುಗ್ಗಿ ಮತ್ತೆ ಅಧಿಕಾರಕ್ಕೆ ಬರುತ್ತೇವೆ.
ನಾವು ಸಹ ದಾವಣಗೆರೆಯಲ್ಲಿ ಸಮಾವೇಶ ಮಾಡುತ್ತೇವೆ. ಆದ್ರೆ, ಇದು ಸಿದ್ದರಾಮೋತ್ಸವಕ್ಕೆ ಕೌಂಟರ್ ಅಲ್ಲ. ಜನಪರ ಯೋಜನೆಗಳನ್ನು ಜನರ ಮನೆ ಬಾಗಿಲಿಗೆ ತಲುಪಿಸುವ ಕಾರ್ಯಕ್ರಮ ಮಾಡುತ್ತೇವೆ. ಈ ಬಗ್ಗೆ ಸಿಎಂ ಹಾಗೂ ಅಧ್ಯಕ್ಷರ ಜೊತೆಗೆ ಚರ್ಚೆ ನಡೆಸಿದ್ದೇವೆ. ಸಿದ್ದರಾಮೋತ್ಸವಕ್ಕೆ ವಿರೋಧ ಮಾಡಿದ್ದು ಕಾಂಗ್ರೆಸ್ ನವರೇ. ಕಾಂಗ್ರೆಸ್ ನಲ್ಲಿ ಗುಂಪುಗಾರಿಕೆ ಇದೆ. ಬಿಜೆಪಿಯಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ ಎಂದರು.
Kshetra Samachara
05/08/2022 08:27 pm