ಚಾಮರಾಜಪೇಟೆ: ಚಾಮರಾಜಪೇಟೆ ಆಟದ ಮೈದಾನದಲ್ಲಿ ಆಗಸ್ಟ್ 15 ರಂದು ಇತಿಹಾಸದಲ್ಲೇ ಮೊದಲ ಬಾರಿಗೆ ಧ್ವಜಾರೋಹಣ ಮಾಡುತ್ತೇವೆ. ಅತ್ಯಂತ ಸಂಭ್ರಮ ಸಡಗರದಿಂದ 75 ನೇ ವರ್ಷದ ಸ್ವಾತಂತ್ರ್ಯೋತ್ಸವ ಆಚರಿಸಲಿದ್ದೇವೆ ಎಂದು ಚಾಮರಾಜಪೇಟೆ ಶಾಸಕ ಜಮೀರ್ ಅಹ್ಮದ್ ತಿಳಿಸಿದರು.
ರಾಷ್ಟ್ರೀಯ ಹಬ್ಬ ಮತ್ತು ರಾಜ್ಯೋತ್ಸವದ ವೇಳೆ ಮಾತ್ರ ಧ್ವಜಾರೋಹಣ ಮಾಡ್ತೇವೆ. ಧ್ವಜಾರೋಹಣ ಕಾರ್ಯಕ್ರಮಕ್ಕಾಗಿ ಸಿದ್ದತೆ ಮಾಡಿಕೊಳ್ಳಲು ಇಂದು ಚಾಮರಾಜಪೇಟೆಯ ಆಟದ ಮೈದಾನವನ್ನು ವೀಕ್ಷಿಸಿದರು.
1999 ಕ್ಕಿಂತ ಮೊದಲು ವಕ್ಫ್ ಮಂಡಳಿ,ಮುಜರಾಯಿ ಇಲಾಖೆ ಎರಡೂ ಕಂದಾಯ ಇಲಾಖೆ ಅಧೀನದಲ್ಲೇ ಇದ್ದವು. S.M.ಕೃಷ್ಣ ರು CM ಆಗಿದ್ದಾಗ ವಕ್ಫ್ ಮಂಡಳಿನ ಪ್ರತ್ಯೇಕಿಸಿದರು. ಮೈದಾನದ ವಿಚಾರ ವಕ್ಫ್ ಮಂಡಳಿ ನೋಡಿಕೊಳ್ಳುತ್ತೆ. ಸದ್ಯ ನಾವು ಸ್ವಾತಂತ್ರ್ಯ ದಿನಾಚರಣೆನ ಆಚರಿಸುವ ತಯಾರಿಯಲ್ಲಿದ್ದೇವೆ ಎಂದು ತಿಳಿಸಿದರು.
ಸುರೇಶ್ ಬಾಬು ಪಬ್ಲಿಕ್ ನೆಕ್ಸ್ಟ್ ಚಾಮರಾಜಪೇಟೆ.
PublicNext
08/08/2022 02:47 pm