ವರದಿ- ಗೀತಾಂಜಲಿ
ಬೆಂಗಳೂರು: 75ನೇ ಸ್ವಾತಂತ್ರ್ಯ ಅಮೃತ ಮಹೋತ್ಸವ ಆಚರಣೆ ಪ್ರಯುಕ್ತ ಇಂದು ರಾಜಾಜಿನಗರ ಕ್ಷೇತ್ರದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಪಾದಯಾತ್ರೆ ಮಾಡಿದ್ದಾರೆ. ಮಾಜಿ ಮೇಯರ್ ಪದ್ಮಾವತಿ, ಮಾಜಿ ಕಾರ್ಪೊರೇಟರ್ ಗಳು ಕೂಡ ಪಾದಯಾತ್ರೆಯಲ್ಲಿ ಭಾಗಿಯಾಗಿದ್ದಾರೆ.
ಇದೇ ವೇಳೆ ಮಾತಾಡಿದ ಡಿ.ಕೆ.ಶಿವಕುಮಾರ್, ಗಾಂಧೀಜಿ ಹಾಕಿಕೊಟ್ಟ ಮಾರ್ಗದಲ್ಲಿ ಪಾದಯಾತ್ರೆ ಮಾಡುತ್ತಿದ್ದೇವೆ. ಪ್ರತಿ ಜಿಲ್ಲೆಯಲ್ಲಿ ೭೫ ಕಿಲೋಮೀಟರ್ ಪಾದಯಾತ್ರೆ ಮಾಡುತ್ತಿದ್ದಾರೆ. ಬೆಂಗಳೂರಿನಲ್ಲಿ ನಮ್ಮ ಶಾಸಕರು ಇಲ್ಲದ ಕ್ಷೇತ್ರದಲ್ಲಿ ಸಂಚಾರ ಮಾಡುತ್ತಿದ್ದೇನೆ. ಪಾಲಿಕೆ ಚುನಾವಣೆ ಮಾಡಬಾರದು ಅಂತ ಬಿಜೆಪಿ ಉದ್ದೇಶವಾಗಿದೆ. ಅವರು ಆಡಿದ್ದೇ ಆಟ ಆಗಿದೆ. ಭ್ರಷ್ಟಾಚಾರ ತಾಂಡವ ಆಡುತ್ತಿದೆ. ಭ್ರಷ್ಟ ಸರ್ಕಾರವನ್ನು ಜನರು ಕಿತ್ತೊಗೆಯುತ್ತಾರೆ ಎಂದರು.
PublicNext
08/08/2022 03:13 pm