ವರದಿ- ಬಲರಾಮ್ ವಿ
ಬೆಂಗಳೂರು: ಮಹದೇವಪುರ ಕ್ಷೇತ್ರದ ಮುನ್ನೆಕೊಳ್ಳಲು ಗ್ರಾಮದಲ್ಲಿ ಕಾಂಗ್ರೆಸ್ ಹಾಗೂ ಆಮ್ ಆದ್ಮಿ ಪಾರ್ಟಿಯ ನೂರಕ್ಕೂ ಹೆಚ್ಚು ಮುಖಂಡರು ಹಾಗೂ ಕಾರ್ಯಕರ್ತರಿಗೆ ಶಾಸಕ ಅರವಿಂದ ಲಿಂಬಾವಳಿ ಅವರು ಪಕ್ಷದ ಶಾಲು ಹಾಕಿ ಬಿಜೆಪಿ ಪಕ್ಷಕ್ಕೆ ಬರಮಾಡಿಕೊಂಡರು.
ನಂತರ ಮಾತನಾಡಿದ ಶಾಸಕ ಅರವಿಂದ ಲಿಂಬಾವಳಿ ಅವರು, ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದ ಕೇಂದ್ರ ಸರ್ಕಾರದ ಜನಪರ ಯೋಜನೆಗಳು, ರಾಜ್ಯ ಬಿಜೆಪಿ ಸರ್ಕಾರದ ಮತ್ತು ಮಹದೇವಪುರ ಕ್ಷೇತ್ರದಲ್ಲಿ ಮಾಡಿರುವ ಅಭಿವೃದ್ಧಿ ಕಾರ್ಯಕ್ರಮಗಳನ್ನು ಮೆಚ್ಚಿ ಕಾಂಗ್ರೆಸ್ ಹಾಗೂ ಆಮ್ ಆದ್ಮಿ ಪಕ್ಷದ ಮುಖಂಡರು ಪಕ್ಷಕ್ಕೆ ಸೇರ್ಪಡೆಗೊಂಡಿದ್ದು, ಮುಂದಿನ ದಿನಗಳಲ್ಲಿ ಎಲ್ಲರೂ ಒಗ್ಗಟ್ಟಾಗಿ ಪಕ್ಷ ಸಂಘಟನೆ ಮತ್ತು ಕ್ಷೇತ್ರದ ಅಭಿವೃದ್ಧಿ ಶ್ರಮಿಸುವುದಾಗಿ ತಿಳಿಸಿದರು.
ಪ್ರಧಾನಿ ಮೋದಿ ಅವರ ನಿರಂತರ ಕಾರ್ಯಗಳಿಂದ ಬಿಜೆಪಿ ಜನ ಮನ್ನಣೆ ಪಡೆಯುತ್ತಿದೆ. ದೇಶದ ಬಹುತೇಕ ಜನ ಬಿಜೆಪಿಯ ಕಾರ್ಯಕರ್ತರಾಗುತ್ತಿದ್ದಾರೆ. ಹೀಗಾಗಿ ವಿಶ್ವದ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ ಎಂದು ತಿಳಿಸಿದರು.
ರಾಜೇಶ್ ರೆಡ್ಡಿ, ಪಟೇಲ್ ವಾಸು ರೆಡ್ಡಿ, ಅರುಣ್ ರೆಡ್ಡಿ, ಹರೀಶ್ ಕುಮಾರ್ ರೆಡ್ಡಿ, ನವೀನ್ ಕುಮಾರ್ ರೆಡ್ಡಿ ಸೇರಿದಂತೆ 100ಕ್ಕೂ ಹೆಚ್ಚು ಮುಖಂಡರು ಬಿಜೆಪಿಗೆ ಸೇರ್ಪಡೆಗೊಂಡರು. ಈ ಸಂದರ್ಭದಲ್ಲಿ ಬಿಜೆಪಿ ನಗರ ಮಂಡಲ ಅಧ್ಯಕ್ಷ ಮನೋಹರ ರೆಡ್ಡಿ, ಜಯಚಂದ್ರಾರೆಡ್ಡಿ, ರಾಜಾರೆಡ್ಡಿ, ಲೋಕೇಶ್ ಮತ್ತಿತರರು ಇದ್ದರು.
PublicNext
08/08/2022 07:47 pm