ಯಲಹಂಕ: 2023ರ ವಿಧಾನಸಭೆ ಚುನಾವಣೆಯಲ್ಲಿ ಯಲಹಂಕದಲ್ಲಿ ಕಾಂಗ್ರೆಸ್ ಪಕ್ಷ ಖಾತೆ ತೆರೆಯಲಿದೆ. ಇದರ ಜೊತೆಗೆ ಕರ್ನಾಟಕದಲ್ಲಿ130ರಿಂದ 150ಕ್ಕು ಹೆಚ್ಚು ವಿಧಾನಸಭೆ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಪಕ್ಷ ಗೆಲ್ಲಲಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ತಿಳಿಸಿದರು.
ಸ್ವಾತಂತ್ರ್ಯದ ಅಮೃತ ಮಹೋತ್ಸವ ಮತ್ತು ಕಾಂಗ್ರೆಸ್ ಪಕ್ಷದ ಮುಖಂಡರ ಬಿಬಿಎಂಪಿ ಪೂರ್ವಸಿದ್ಧತಾ ಸಭೆ ಯಲಹಂಕ ಚೌಡೇಶ್ವರಿ ಕಲ್ಯಾಣ ಮಂಟಪದಲ್ಲಿ ನಡೆಯಿತು. ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಸಭೆಯ ಆಕರ್ಷಣೆಯಾಗಿದ್ದರೆ, ಯುವ ಕಾಂಗ್ರೆಸ್ ಪಕ್ಷ ಅಧ್ಯಕ್ಷ ನಲಪಾಡ್, ವೀರಪ್ಪ ಮೊಯ್ಲಿ ಮತ್ತು ಯಲಹಂಕದ ಸ್ಥಳೀಯ ಕಾಂಗ್ರೆಸ್ ಮುಖಂಡರು ಉಪಸ್ಥಿತರಿದ್ದರು.
PublicNext
09/08/2022 09:38 am