ವರದಿ- ಗೀತಾಂಜಲಿ
ಬೆಂಗಳೂರು: ಸ್ವಾತಂತ್ರ್ಯ ಅಮೃತ ಮಹೋತ್ಸವಕ್ಕೆ ಕಾಂಗ್ರೆಸ್ ಪಾದಯಾತ್ರೆ ನಡೆಸಿತ್ತು. ಈಗ ಕಾರ್ಯಕ್ರಮ ಆಯೋಜನೆ ಮತ್ತು ರೂಟ್ ಮ್ಯಾಪ್ ವಿಚಾರವಾಗಿ ಚರ್ಚೆ ಮಾಡಲಾಗಿದೆ. ಇನ್ನು ಪೊಲೀಸ್ ಅಧಿಕಾರಿಗಳಿಗೆ ಕಾರ್ಯಕ್ರಮದ ರೂಟ್ ಬಗ್ಗೆ ವಿವರಣೆಯನ್ನ ಕೈ ನಾಯಕರು ಕೊಟ್ಟಿದ್ದಾರೆ.
ಕೆಪಿಸಿಸಿ ಕಚೇರಿಯಲ್ಲಿ ಮೀಟಿಂಗ್ ನಲ್ಲಿ ಇದೇ ವಿಷಯವಾಗಿ ಕಾಂಗ್ರೆಸ್ ನಾಯಕರು ಚರ್ಚೆ ಮಾಡ್ತಿದ್ದಾರೆ. ಮೀಟಿಂಗ್ ನಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್, ಕಾರ್ಯಧ್ಯಕ್ಷರಾದ ರಾಮಲಿಂಗಾರೆಡ್ಡಿ, ಸಲೀಂ ಅಹ್ಮದ್, ಸಂಸದ ಡಿ.ಕೆ.ಸುರೇಶ್ ಭಾಗಿಯಾಗಿದ್ದಾರೆ. ಕಾರ್ಯಕ್ರಮದ ಅಂತಿಮ ಸಿದ್ಧತೆ ಬಗ್ಗೆ ನಾಯಕರು ಚರ್ಚೆ ಮಾಡಿದ್ದು, ಸಭೆಯಲ್ಲಿ ಪೊಲೀಸ್ ಅಧಿಕಾರಿಗಳು ಕೂಡ ಭಾಗಿಯಾಗಿದ್ದಾರೆ.
PublicNext
09/08/2022 04:49 pm