ಬೆಂಗಳೂರು: ಕುಟುಂಬ ಸಮೇತ ಮಂತ್ರಾಲಯಕ್ಕೆ ಹೋಗ್ತಿದ್ದೇವೆ. ರಾಯರ ದರ್ಶನ ಮಾಡಿ, ನಾಳೆ ವಾಪಸ್ ಬರ್ತೇನೆ. ಮಂತ್ರಾಲಯದಿಂದ ಬಂದ ನಂತರ ರಾಜ್ಯ ಪ್ರವಾಸ ಮಾಡ್ತೀನಿ. ಯಾವುದೇ ಕಾರಣಕ್ಕೂ ಕಾಂಗ್ರೆಸ್ ಅಧಿಕಾರಕ್ಕೆ ಬರದ ರೀತಿ ನಾವು ನೋಡಿಕೊಳ್ತೇವೆ ಎಂದು ಮಾಜಿ ಸಿಎಂ ಯಡಿಯೂರಪ್ಪ ಹೇಳಿದರು.
ಯಾರು ಸಿಎಂ ಕನಸು ಕಾಣ್ತಿದ್ದಾರೋ ಅವರ ಭ್ರಮೆ ಅಷ್ಟೇ. ಯಾವುದೇ ಕಾರಣಕ್ಕೂ ಅವರ ಆಸೆ ಈಡೇರುವುದಿಲ್ಲ. ನೂರಕ್ಕೆ ನೂರರಷ್ಟು ನಾವು ಮತ್ತೆ ಅಧಿಕಾರಕ್ಕೆ ಬರುತ್ತೇವೆ. ಇದರಲ್ಲಿ ಯಾವುದೇ ಅನುಮಾನ ಇಲ್ಲ. ಬೊಮ್ಮಾಯಿ ಅವರೇ ಸಿಎಂ ಆಗಿ ಮುಂದುವರಿಯುತ್ತಾರೆ.
ಅಮಿತ್ ಷಾ ರಾಜ್ಯ ರಾಜಕಾರಣದ ಬಗ್ಗೆ ಚರ್ಚೆ ಮಾಡಿದ್ರು ಅಷ್ಟೇ. ಆದರೆ, ನಾಯಕತ್ವದ ಬಗ್ಗೆ ಯಾವುದೇ ಚರ್ಚೆ ಆಗಿಲ್ಲ. ಆದಷ್ಟು ಬೇಗ ಸಚಿವ ಸಂಪುಟ ವಿಸ್ತರಣೆ ಬಗ್ಗೆ ನಿರ್ಧಾರ ಆಗುತ್ತದೆ. ಇದಕ್ಕೆ ಹೈಕಮಾಂಡ್ ನಾಯಕರು ಕೂಡ ಸಹಕಾರ ಕೊಡ್ತಾರೆ.
ಶಿಕಾರಿಪುರದಲ್ಲಿ ವಿಜಯೇಂದ್ರ ಸ್ಪರ್ಧೆ ಬಗ್ಗೆ ಹೇಳಿದ್ದೇನೆ. ಆದರೆ, ಅಂತಿಮವಾಗಿ ಈ ಬಗ್ಗೆ ತೀರ್ಮಾನ ಮಾಡೋದು ಹೈಕಮಾಂಡ್ ಎಂದು ಯಡಿಯೂರಪ್ಪ ತಿಳಿಸಿದರು.
PublicNext
10/08/2022 04:55 pm