ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಂಗಳೂರು: ಬೈರತಿ ಬಸವರಾಜುಗೆ ಕಾಂಗ್ರೆಸ್ ತಕ್ಕ ಪಾಠ ಕಲಿಸಲಿದೆ; ಡಿಕೆಶಿ

ವರದಿ- ಬಲರಾಮ್ ವಿ.

ಬೆಂಗಳೂರು: ಕಾಂಗ್ರೆಸ್ ಪಕ್ಷದಲ್ಲಿ ಅಧಿಕಾರ ಹಾಗೂ ಎಲ್ಲಾ ರೀತಿಯ ಸ್ಥಾನಮಾನಗಳನ್ನು ಪಡೆದು ಪಕ್ಷಕ್ಕೆ ಮೋಸ ಮಾಡಿ ವಲಸೆ ಹೋಗಿರುವ ಬೈರತಿ ಬಸವರಾಜು ವಿರುದ್ಧ ಸೂಕ್ತ ಅಭ್ಯರ್ಥಿ ಹಾಕುವ ಮೂಲಕ ಮುಂದಿನ ಚುನಾವಣೆಯಲ್ಲಿ ತಕ್ಕ ಪಾಠ ಕಲಿಸುತ್ತೇವೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.

ಕೆ.ಆರ್.ಪುರದಲ್ಲಿ ಕಾಂಗ್ರೆಸ್‌ ಪಕ್ಷದ ವತಿಯಿಂದ ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವ ಅಂಗವಾಗಿ ಆಗಸ್ಟ್ 15 ರಂದು ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ವೃತ್ತದಿಂದ ನ್ಯಾಷನಲ್ ಕಾಲೇಜು ಮೈದಾನದವರೆಗೆ ಹಮ್ಮಿಕೊಂಡಿರುವ ಪಾದಯಾತ್ರೆಯ ಪೂರ್ವಭಾವಿ ಸಭೆಯಲ್ಲಿ ಭಾಗವಹಿಸಿ ಮಾತನಾಡಿದರು.

ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಬಿ.ಕೆ.ಹರಿಪ್ರಸಾದ್, ಮಾಜಿ ವಿಧಾನ ಪರಿಷತ್ ಸದಸ್ಯ ನಾರಾಯಣ ಸ್ವಾಮಿ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಡಿ.ಕೆ.ಮೋಹನ್, ಕೆಪಿಸಿಸಿ ಸದಸ್ಯ ಕಲ್ಕೆರೆ ನಾರಾಯಣ ಸ್ವಾಮಿ, ಯುವ ಕಾಂಗ್ರೆಸ್ ಅಧ್ಯಕ್ಷ ಮಹಮದ್ ನಲಪಾಡ್ ಉಪಸ್ಥಿತರಿದ್ದರು.

Edited By : Nagesh Gaonkar
PublicNext

PublicNext

13/08/2022 10:31 pm

Cinque Terre

48 K

Cinque Terre

1

ಸಂಬಂಧಿತ ಸುದ್ದಿ