ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಂಗಳೂರು: ಮಕ್ಕಳಿಂದ ರಾಖಿ ಕಟ್ಟಿಸಿಕೊಂಡ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್

ಬೆಂಗಳೂರು: ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಮಕ್ಕಳಿಂದ ರಾಖಿ ಕಟ್ಟಿಸಿಕೊಂಡಿದ್ದಾರೆ.

ರಾಜಭವನದಲ್ಲಿ ರಾಷ್ಟ್ರೋತ್ತಾನ ಪರಿಷತ್‌ನ ಮಕ್ಕಳೊಂದಿಗೆ ರಕ್ಷಾ ಬಂಧನವನ್ನ ರಾಜ್ಯಪಾಲರು ಆಚರಿಸಿದ್ದಾರೆ. ಇದೇ ವೇಳೆ ಮಕ್ಕಳೊಂದಿಗೆ ರಾಜ್ಯಪಾಲರು ಸಂವಾದ ನಡೆಸಿದರು. ದೇಶಾದ್ಯಂತ 75ನೇ ಸ್ವಾತಂತ್ರ್ಯ ಅಮೃತ ಮಹೋತ್ಸವ ಆಚರಿಸಲಾಗುತ್ತಿದೆ. ಮಕ್ಕಳು ಸಂಭ್ರಮದಲ್ಲಿ ಭಾಗವಹಿಸಿ ದೇಶದ ಏಕತೆಯನ್ನು ಮತ್ತಷ್ಟು ಗಟ್ಟಿಗೊಳಿಸಬೇಕು. ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟ ಹಿರಿಯರನ್ನು ಸ್ಮರಿಸಿ ಅವರಿಗೆ ಗೌರವ ಸಲ್ಲಿಸಬೇಕು. 'ಹರ್ ಘರ್ ತಿರಂಗಾ' ಅಭಿಯಾನದಲ್ಲಿ ಮಕ್ಕಳು ಕೈಜೋಡಿಸಬೇಕು ಎಂದು ಗೆಹ್ಲೋಟ್ ಹೇಳಿದ್ದಾರೆ.

Edited By : Vijay Kumar
Kshetra Samachara

Kshetra Samachara

14/08/2022 05:18 pm

Cinque Terre

1.02 K

Cinque Terre

0

ಸಂಬಂಧಿತ ಸುದ್ದಿ