ಬೆಂಗಳೂರು: ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಅವರ ಬೆಂಗಾವಲು ವಾಹನ ಚಾಲಕರಾಗಿದ್ದ ತಿರುಮಲೇಶ್ ನಿನ್ನೆ (ಗುರುವಾರ) ರಾತ್ರಿ 11 ಗಂಟೆಗೆ ಹೃದಯಾಘಾತದಿಂದ ನಿಧನರಾಗಿದ್ದಾರೆ.
ಸುಮಾರು 16 ವರ್ಷಗಳಿಂದ ಯಡಿಯೂರಪ್ಪ ಅವರ ಬಳಿಯೇ ಬೆಂಗಾವಲು ಸಿಬ್ಬಂದಿಯಾಗಿ ತಿರುಮಲೇಶ್ ಕರ್ತವ್ಯ ನಿರ್ವಹಿಸುತ್ತಿದ್ದರು. ನಿನ್ನೆ ಕರ್ತವ್ಯ ಮುಗಿಸಿ ಮನೆಗೆ ತೆರಳುತ್ತಿದ್ದಾಗ ತಿರುಮಲೇಶ್ ಹೃದಯಾಘಾತದಿಂದ ಸಾವನ್ನಪ್ಪಿದಾರೆ. ಇವರ ಅಕಾಲಿಕ ಅಗಲಿಕೆಗೆ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
PublicNext
19/08/2022 11:26 am