ಬೆಂಗಳೂರು- ಮಾಜಿ ಸಿಎಂ ಸಿದ್ದರಾಮಯ್ಯ ಮೇಲೆ ಆದಂತ ಹಲ್ಲೆ ಖಂಡಿಸಿ ಕಾಂಗ್ರೆಸ್ ಟ್ವೀಟ್ ನಲ್ಲಿ ಕಿಡಿಕಾರಿದೆ. ಸಿದ್ದರಾಮಯ್ಯ ಅವರು ಸಾಗುವ ದಾರಿಯಲ್ಲಿ ಹಾಗೂ ಅವರು ಆಗಮಿಸುವ ಸ್ಥಳದಲ್ಲೇ ಬಿಜೆಪಿ ಗೂಂಡಾಗಳು ಜಾಮಾಯಿಸಿದ್ದರೂ, ಮುನ್ಸೂಚನೆ ಇದ್ದರೂ ಪೊಲೀಸರು ಅವರನ್ನು ವಶಕ್ಕೆ ಪಡೆಯದೆ ಅವರ ರಕ್ಷಣೆಗೆ ನಿಂತಿದ್ದರು. ಗೂಂಡಾಗಳಿಗೆ ರಕ್ಷಣೆ ನೀಡುವುದು ಸರ್ಕಾರದ ನಿರ್ದೇಶನವಾಗಿತ್ತೇ? ಎಂದು ಕಾಂಗ್ರೆಸ್ ಪ್ರಶ್ನೆ ಮಾಡಿದೆ. ಅಷ್ಟೇ ಅಲ್ಲದೆ ಕರ್ತವ್ಯಲೋಪವೆಸಗಿದ ಕೊಡಗು ಜಿಲ್ಲಾ SPಯನ್ನು ಕೂಡಲೇ ಅಮಾನತುಗೊಳಿಸಿ ಎಂದು ಕಾಂಗ್ರೆಸ್ ಟ್ವೀಟ್ ಮಾಡಿದೆ.
PublicNext
19/08/2022 02:37 pm