ದೊಡ್ಡಬಳ್ಳಾಪುರ : ದೇವನಹಳ್ಳಿಯಲ್ಲಿ ಜಿಲ್ಲಾ ಕೇಂದ್ರವಾಗಿ ಸಚಿವರ ಘೋಷಣೆ ದೊಡ್ಡಬಳ್ಳಾಪುರ ನಿವಾಸಿಗಳ ಆಕ್ರೋಶಕ್ಕೆ ಕಾರಣವಾಗಿದೆ. ನಗರದಲ್ಲಿ ಪ್ರತಿಭಟನೆ ನಡೆಸಿದ ಜಿಲ್ಲಾ ಕೇಂದ್ರ ಹೋರಾಟ ಸಮಿತಿ ಮುಖಂಡರು ಸಚಿವ ಡಾ ಕೆ ಸುಧಾಕರ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ನಗರಕ್ಕೆ ಭೇಟಿ ನೀಡಲು ಅವಕಾಶ ನೀಡುವುದಿಲ್ಲವೆಂದು ಎಚ್ಚರಿಕೆ ನೀಡಿದರು.
ದೇವನಹಳ್ಳಿಯನ್ನ ಜಿಲ್ಲಾ ಕೇಂದ್ರವನ್ನಾಗಿ ಮಾಡುವ ಸಚಿವ ಡಾ.ಕೆ.ಸುಧಾಕರ್ ಹೇಳಿಕೆಗೆ ದೊಡ್ಡಬಳ್ಳಾಪುರದಲ್ಲಿ ಆಕ್ರೋಶ ವ್ಯಕ್ತವಾಗಿದೆ. ಸಚಿವರ ಹೇಳಿಕೆ ವಿರುದ್ಧ ಜಿಲ್ಲಾ ಕೇಂದ್ರ ಹೋರಾಟ ಸಮಿತಿ ಇಂದು ನಗರದಲ್ಲಿ ಪ್ರತಿಭಟನೆ ಹಮ್ಮಿಕೊಂಡಿತ್ತು. ಮಾಜಿ ಶಾಸಕರು ಮತ್ತು ಹಾಲಿ ಶಾಸಕರ ನಿರಾಸಕ್ತಿಯೇ ದೊಡ್ಡಬಳ್ಳಾಪುರಕ್ಕೆ ಜಿಲ್ಲಾ ಕೇಂದ್ರ ಕೈತಪ್ಪಿ ದೇವನಹಳ್ಳಿ ಪಾಲಾಗಲಿದೆ. ಸಚಿವರು ತಮ್ಮ ಹೇಳಿಕೆ ವಾಪಸ್ ಪಡೆಯದ ಹೊರತು ದೊಡ್ಡಬಳ್ಳಾಪುರಕ್ಕೆ ಬರಲು ಬೀಡುವುದಿಲ್ಲವೆಂದು ಹೇಳಿದ್ದಾರೆ.
ಪ್ರತಿಭಟನೆ ಬಗ್ಗೆ ಚಿಕ್ಕಬಳ್ಳಾಪುರದಲ್ಲಿ ಮಾತನಾಡಿದ ಸಚಿವ ಸುಧಾಕರ್, ಇದು ರಾಜಕೀಯ ದುರುದ್ದೇಶದಿಂದ ಮಾಡುತ್ತಿರುವ ಹೋರಾಟ ಅಷ್ಟೇ, ಹಿಂದೆ ಮಾಡಿದ ತಿರ್ಮಾನದಂತೆ ದೇವನಹಳ್ಳಿಯನ್ನ ಜಿಲ್ಲಾ ಕೇಂದ್ರವಾಗಿ ಘೋಷಣೆ ಮಾಡಲಾಗುವುದು. ಭೌಗೋಳಿಕವಾಗಿ ನಾಲ್ಕು ತಾಲೂಕುಗಳಿಗೂ ಮಧ್ಯದಲ್ಲಿ ದೇವನಹಳ್ಳಿಯನ್ನ ನಮ್ಮ ಸರ್ಕಾರ ಜಿಲ್ಲಾ ಕೇಂದ್ರದ ಘೋಷಣೆ ಮಾಡಿ ಆದೇಶ ಹೊರಡಿಸಲಿದೆ ಎಂದರು.
ನ್ಯಾಯವಾಗಿ ಉಪ ವಿಭಾಗಧಿಕಾರಿ ಕಚೇರಿ ಇರುವ ದೊಡ್ಡಬಳ್ಳಾಪುರಕ್ಕೆ ಜಿಲ್ಲಾ ಕೇಂದ್ರ ಸಿಗಬೇಕಿತ್ತು, ಆದರೆ ದೊಡ್ಡಬಳ್ಳಾಪುರ ಶಾಸಕ ಟಿ ವೆಂಕಟರಮಣಯ್ಯ ಇಚ್ಛಾಶಕ್ತಿಯ ಕೊರತೆಯ ಫಲವೇ ಇಂದು ದೊಡ್ಡಬಳ್ಳಾಪುರ ನಗರಕ್ಕೆ ಜಿಲ್ಲಾ ಕೇಂದ್ರ ಕೈತಪ್ಪಲಿದೆ ಎಂದರು.
Kshetra Samachara
19/08/2022 07:30 pm